ದಾವಣಗೆರೆ: 2022-23ನೇ ಸಾಲಿನ ಶೈಕ್ಷಣಿಕ ಶುಲ್ಕ ಮರುಪಾವತಿಗಾಗಿ ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ರಾಷ್ಟ್ರೀಯ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ಪಡೆದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಿಗೆ ಭಾರತ ಸರ್ಕಾರದಿಂದ ನಿಯೋಜಿಸಲ್ಪಟ್ಟ ತಂಡದಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಿದ ರಾಜ್ಯದ ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕವನ್ನು ಮರುಪಾವತಿಸುವ ಯೋಜನೆಯನ್ನು ಅನುಷ್ಟಾನಗೊಳಿಸಲು ಅರ್ಹ ಕ್ರೀಡಾಪಟುಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಯನ್ನು ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ದಾವಣಗೆರೆ ಕಛೇರಿಯಲ್ಲಿ ಪಡೆಯಬಹುದು. ಅರ್ಜಿ ಸಲ್ಲಿಸಲು ಅ.21 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ವಿವರಗಳಿಗೆ 08192-237480 ಸಂಪರ್ಕಿಸಬಹುದೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.



