ದಾವಣಗೆರೆ: ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ಉಚ್ಚoಗಿದುರ್ಗದ ಶ್ರೀ ಉಚ್ಚoಗೆಮ್ಮನ ದೇವಸ್ಥಾನದಲ್ಲಿ ಸರ್ಕಾರದ ಆದೇಶದಂತೆ ನಾಳೆ (ಸೆ.30) ಶುಕ್ರವಾರ ಲೋಕ ಕಲ್ಯಾಣಕ್ಕಾಗಿ ವಿಶೇಷ ಕುಂಕುಮಾರ್ಚನೆ ಪೂಜೆ ಆಯೋಜಿಸಲಾಗಿದೆ.
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ದೇವಸ್ಥಾನಗಳಲ್ಲಿ ಮಹಿಳೆಯರಿಗೆ ದೇವಸ್ಥಾನಕ್ಕೆ ಆಹ್ವಾನ ಮಾಡಿ ಲೋಕ ಕಲ್ಯಾಣಕ್ಕಾಗಿ ಸಾಮೂಹಿಕ ಕುಂಕುಮಾರ್ಚನೆಯನ್ನು ಮಾಡಲಾಗುತ್ತದೆ. ಈ ಕಾರ್ಯಕ್ರಮಕ್ಕೆ ಹೆಚ್ಚಿನ ಮಹಿಳೆಯರು ಭಾಗವಹಿಸಬೇಕು ಎಂದು ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಪ್ಪ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



