ದಾವಣಗೆರೆ: ಅಡಿಕೆ ಬೆಳೆಯ ಡ್ರಿಪ್ ವೈರ್ ಸುತ್ತಲು ಹೋಗಿದ್ದಾಗ ಕಾರ್ಮಿಕನ ಮೇಲೆ ವಿದ್ಯುತ್ ಕಂಬ ಮುರಿದು ಬಿದ್ದು ಸಾವನ್ನಪ್ಪಿದ ಘಟನೆ ದಾವಣಗೆರೆ ಸಮೀಪದ ಎಚ್. ಕಲ್ಪನಹಳ್ಳಿಯಲ್ಲಿ ನಡೆದಿದೆ.
ಜಮೀನಲ್ಲಿ ಉಳುಮೆ ಮಾಡುತ್ತಿದ್ದ ಟ್ರ್ಯಾಕ್ಟರ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ವಿದ್ಯುತ್ ಕಂಬ ಮುರಿದು ನೆಲೆಕ್ಕೆ ಬಿದ್ದಿದೆ. ಅಲ್ಲೇ ಡ್ರಿಪ್ ವೈರ್ ಸುತ್ತುತ್ತಿದ್ದ ವಿನಯ್ (37) ಮೇಲೆ ವಿದ್ಯುತ್ ಕಂಬ ಬಿದ್ದ ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಹೆಚ್. ಕಲ್ಪನಹಳ್ಳಿಯ ಮಹೇಶ್ ಎಂಬವರ ಜಮೀನಲ್ಲಿ ಕೆಲಸ ಮಾಡುತ್ತಿದ್ದಾಗ ಈ ಘಟನೆ ನಡೆದಿದೆ. ಮೃತ ವಿನಯ್ ಗೆ ವಿವಾಹವಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಈ ಸಂಬಂಧ ದಾವಣಗೆರೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



