ದಾವಣಗೆರೆ: ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಅಕ್ಟೋಬರ್ 12 ರಂದು ದಾವಣಗೆರೆ ಪ್ರವಾಸ ಕೈಗೊಳ್ಳಲಿದ್ದಾರೆ. ಸಾರ್ವಜನಿಕರು ತಮ್ಮ ದೂರುಗಳನ್ನು ಸಲ್ಲಿಸಬಹುದು.
ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎಸ್ ಕೌಲಾಪೂರೆ ಅವರು ಅ.12 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ರವರೆಗೆ ದಾವಣಗೆರೆ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು. ವಿವಿಧ ಇಲಾಖೆಗಳಿಗೆ ಸಲ್ಲಿಸಿದ ಅರ್ಜಿಗಳನ್ನು ಇತ್ಯರ್ಥಪಡಿಸದೇ ಇರುವ ತಮ್ಮ ಅಹವಾಲುಗಳನ್ನು ಖುದ್ದಾಗಿ ಬಂದು ಸಲ್ಲಿಸಬಹುದು.



