ದಾವಣಗೆರೆ: ಡಾಲಿ ಧನಂಜಯ್ ನಟನೆಯ ‘ಹೆಡ್ ಬುಷ್’ ಚಿತ್ರದ ಪ್ರೀ ರಿಲೀಸ್ ಈವೆಂಟ್ ಅ.16ರಂದು ದಾವಣಗೆರೆಯಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ರಮ್ಯಾ ಹಾಗೂ ರಚಿತಾರಾಮ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಈ ಸಿನಿಮಾದಲ್ಲಿ ಧನಂಜಯ್ ನಟನೆ ಜತೆ ನಿಮಾರ್ಣದ ಹೊಣೆ ಹೊತ್ತುಕೊಂಡಿದ್ದಾರೆ. ಪ್ರಚಾರದ ಮೂಲಕ ದೊಡ್ಡಮಟ್ಟದಲ್ಲಿ ಸಿನಿಮಾ ಜನರಿಗೆ ತಲುಪಿಸುವ ಕೆಲಸದಲ್ಲಿ ನಿರತರಾಗಿದ್ದಾರೆ. ಈಮೂಲಕ ಡಾಲಿ ಈಗ ದಾವಣಗೆರೆ ಕಾರ್ಯಕ್ರಮಕ್ಕೆ ಸಜ್ಜಾಗುತ್ತಿದ್ದಾರೆ. ‘ಹೆಡ್ ಬುಷ್’ ಅ.21ಕ್ಕೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗುತ್ತಿದೆ.



