ದಾವಣಗೆರೆ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ರಾಜ್ಯ ಸರ್ಕಾರದ ಅನುದಾನಿತ ಯೋಜನೆಯಾದ “ಯುವ ಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಸೇವೆಗಳ ಸಮಗ್ರ ಅಭಿವೃದ್ಧಿ ಮತ್ತು ಅನುಷ್ಠಾನ ಯೋಜನೆ” ಯಡಿಯಲ್ಲಿ ಯುವಪರಿವರ್ತಕರ ಹಾಗೂ ಯುವ ಸಮಾಲೋಚಕ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆ ವಿವರ : ಯುವ ಸಮಾಲೋಚಕರು (ಮಹಿಳೆ) 1, ಯುವ ಪರಿವರ್ತಕರು (ಮಹಿಳೆ) 01, ಯುವ ಪರಿವರ್ತಕರು (ಪುರುಷ) 03 ಸ್ಥಾನಗಳಿಗೆ ಯಾವುದೇ ಪದವಿ ಹಾಗೂ ಮೇಲ್ಪಟ್ಟ ಕನಿಷ್ಠ 21 ರಿಂದ 35 ವರ್ಷ ವಯೋಮಿತಿ ಹೊಂದಿರಬೇಕು. ಆಯ್ಕೆಯಾದ ಅಭ್ಯರ್ಥಿಗಳು ಅದೇ ಜಿಲ್ಲೆಯಲ್ಲಿ ವಾಸಿಸುತ್ತಿರುವ ಖಾಯಂ ನಿವಾಸಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಯ್ಕೆಯಾಗುವ ಯುವ ಪರಿವರ್ತಕರು ಹೊನ್ನಾಳಿ, ನ್ಯಾಮತಿ, ಜಗಳೂರು, ಚನ್ನಗಿರಿ ಮತ್ತು ಹರಿಹರ ತಾಲ್ಲೂಕುಗಳಲ್ಲಿ ಕಾರ್ಯನಿರ್ವಹಿಸಲು ಸಿದ್ಧರಿರತಕ್ಕದ್ದು. ಸ್ಥಳೀಯ ಭಾಷೆ ಕನ್ನಡವನ್ನು ಸ್ಪಷ್ಟವಾಗಿ ಮಾತನಾಡುವರು, ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ ಹಾಗೂ ಹುಮ್ಮಸ್ಸನ್ನು ಮತ್ತು ಉತ್ತಮ ಸಂವಹನ ಕೌಶಲ್ಯದ ಜೊತೆಗೆ ಸಂವಾದ ಕೌಶಲ್ಯಗಳನ್ನು ಹೊಂದಿರಬೇಕು. ಸಮುದಾಯದಲ್ಲಿ ಯುವಜನರಿಗೆ ತರಬೇತಿಯಂತಹ ಕಾರ್ಯಕ್ರಮಗಳನ್ನು ನಡೆಸುವುದು.
ಅರ್ಹತಾ ಮಾನದಂಡಗಳನ್ನು ಹೊಂದಿದ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಗಳನ್ನು ಅಕ್ಟೋಬರ್ 10 ರ ಸಂಜೆ 4 ಗಂಟೆಯೊಳಗೆ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ ಇಲ್ಲಿಗೆ ಅಥವಾ ದೂರವಾಣಿ ಸಂಖ್ಯೆ- 08192-237480, 9008343253 ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.