ಹುಬ್ಬಳ್ಳಿ: ದಾವಣಗೆರೆ ಸೇರಿದಂತೆ ಐದು ಕಡೆ ಕೈಗಾರಿಕಾ ವಿಶೇಷ ಟೌನ್ ಶಿಪ್ ಸ್ಥಾಪಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಬಂಡವಾಳ ಹೂಡಿಕೆದಾರರ ಓಡಂಬಡಿಕೆ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅಚರು ಚಿತ್ರದುರ್ಗ, ಹಾವೇರಿ, ದಾವಣಗೆರೆ, ಧಾರವಾಡ ಹಾಗೂ ಬೆಳಗಾವಿಯಲ್ಲಿ ಕೈಗಾರಿಕಾ ವಿಶೇಷ ಟೌನ್ ಶಿಪ್ ಸ್ಥಾಪಿಸಲಾಗುವುದು.
ಎಸ್ ಐಆರ್ ಕರಡು ಪ್ರತಿ ಸಿದ್ಧಗೊಂಡಿದ್ದು, ಬೆಂಗಳುರು ನಂತರ ಕೈಗಾರಿಕಾ ಬೆಳವಣಿಗೆಗೆ ಅತ್ಯಂತ ಪ್ರಶಸ್ತವಾದ ನಗರವೆಂದರೆ ಅದು ಹುಬ್ಬಳ್ಳಿ-ಧಾರವಾಡ, ಮುಂಬೈ-ಚೆನ್ನೈ ಕೈಗಾರಿಕಾ ಕಾರಿಡಾರ್ ನಿಂದ ರಾಜ್ಯದಲ್ಲಿ ಮಹತ್ತರ ಬದಲಾವಣೆಯಾಗಲಿವೆ. ಹೀಗಾಗಿ ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿಯಲ್ಲಿ ಕೈಗಾರಿಕಾ ಟೌನ್ ಶಿಪ್ ಸ್ಥಾಪಿಸಲು ಉದ್ದೇಶಿಸಲಾಗಿದೆ. ಪ್ರತಿ ಕಡೆಯೂ ತಲಾ 1 ಸಾವಿರ ಎಕರೆ ಪ್ರದೇಶದಲ್ಲಿ ಟೌನ್ ನಿರ್ಮಿಸಲಾಗುವುದು. ಚಿತ್ರದುರ್ಗ, ದಾವಣಗೆರೆ, ಬೆಳಗಾವಿಯಲ್ಲಿ ಈಗಾಗಲೇ ಜಾಗ ಗುರುತಿಸಲಾಗಿದೆ. ಧಾರವಾಡ ಹಾಗೂ ಹಾವೇರಿಯಲ್ಲಿ ಜಾಗ ಗುರುತಿಸಲಾಗುವುದು ಎಂದು ತಿಳಿಸಿದ್ದಾರೆ.



