ದಾವಣಗೆರೆ: ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2022-23ನೇ ಸಾಲಿನಲ್ಲಿ ಅಂಧ ವಿದ್ಯಾರ್ಥಿಗಳಿಗೆ ಬ್ರೈಲ್ ಕಿಟ್‍ಗಳನ್ನು ವಿತರಿಸುವ ಯೋಜನೆಯಡಿ ಎಸ್.ಎಸ್.ಎಲ್.ಸಿ ಹಾಗೂ ನಂತರದ ವಿದ್ಯಾಭ್ಯಾಸ ಮಾಡುವ ಅಂಧ ವಿದ್ಯಾರ್ಥಿಗಳಿಗೆ ಬ್ರೈಲ್ ಕಿಟ್‍ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನ.30 ಕೊನೆಯ ದಿನಾಂಕವಾಗಿರುತ್ತದೆ.
ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲೆಗಳು: ಯು.ಡಿ.ಐ.ಡಿ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ, ಶಾಲಾ/ಕಾಲೇಜು ದೃಢೀಕರಣ ಪ್ರಮಾಣ ಪತ್ರ, 2 ಭಾವಚಿತ್ರ, ಇತರೆ ಇಲಾಖೆಗಳಿಂದ ಪಡೆದಿರುವ ಬಗ್ಗೆ ಸ್ವಯಂ ದೃಢೀಕರಣ ಪತ್ರ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಹೊನ್ನಾಳಿ-ಶೈಲಜಾ ಕೆ.ಎಂ. 9886366809, ಚನ್ನಗಿರಿ-ಕೆ ಸುಬ್ರಮಣ್ಯಂ 9945738141, ಜಗಳೂರು-ಎಂ ಕೆ ಶಿವನಗೌಡ 9945738141, ಹರಿಹರ-ಶಶಿಕಲಾ.ಟಿ. 9945458058, ದಾವಣಗೆರೆ-ಚನ್ನಪ್ಪ.ಬಿ 9590829024 ತಾಲ್ಲೂಕು ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರ ಕಛೇರಿಗೆ ಭೇಟಿ ನೀಡಿ ಅರ್ಜಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಡಾ.ಕೆ.ಕೆ. ಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



