ಬೆಂಗಳೂರು; ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಇನ್ನೂ 4 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದಿನಿಂದ ನವೆಂಬರ್ 7ರವರೆಗೆ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ತುಮಕೂರು, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಾಮರಾಜನಗರ, ಕೋಲಾರ, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ. ಇಂದು ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆ ಸುರಿಯುವ ಸಾಧ್ಯತೆ ಇದೆ. ಈ ಮಳೆ ಮುಂದಿನ 4 ದಿನಗಳವರೆಗೆ ಇರಲಿದೆ ಎಂದು ಎಚ್ಚರಿಕೆ ನೀಡಿದೆ.
Rainfall Forecast: Scattered to widespread very light to moderate rains likely over Malnad, SIK & Coastal districts, and isolated very light to light rains likely over NIK districts. pic.twitter.com/ejhqESv8Bf
— Karnataka State Natural Disaster Monitoring Centre (@KarnatakaSNDMC) November 2, 2022



