ಬೆಂಗಳೂರು: ತುಮಕೂರು ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಎಸ್.ಪಿ. ಮುದ್ದಹನುಮೇಗೌಡ ಮತ್ತು ಚಿತ್ರದುರ್ಗ ಕ್ಷೇತ್ರದ ಮಾಜಿ ಸಂಸದ, ನಟ ಶಶಿಕುಮಾರ್, ನಿವೃತ್ತ ಐಎಎಸ್ ಅಧಿಕಾರಿ ಅನಿಲ್ ಕುಮಾರ್ ಇಂದು(ನ.03) ಬಿಜೆಪಿ ಸೇರ್ಪಡೆಯಾದರು.
ನಗರದ ಬಿಜೆಪಿ ಕಚೇರಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಸೆರ್ಪಡೆಯಾದರು. ಸಚಿವರಾದ ಅಶ್ವಥ್ ನಾರಾಯಣ್, ಎಸ್.ಟಿ. ಸೋಮಶೇಖರ್, ಗೋವಿಂದ ಕಾರಜೋಳ, ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಹಾಗೂ ಶಾಸಕರಾದ ಮಸಾಲೆ ಜಯರಾಂ, ಸಿ.ಪಿ.ಯೋಗೀಶ್ವರ್, ರಾಜ್ಯಸಭಾ ಸದಸ್ಯ ಜಗ್ಗೇಶ್, ರಾಜ್ಯ ಬಿಜೆಪಿ ಸಂಘಟನಾ ಪ್ರದಾನ ಕಾರ್ಯದರ್ಶಿ ರಾಜೇಶ್ ಈ ವೇಳೆ ಇದ್ದರು.
2019 ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಕೈ ಟಿಕೆಟ್ ತಪ್ಪಿದ್ದಕ್ಕೆ ಅಸಮಾಧಾನಗೊಂಡ ಮುದ್ದಹನುಮೇಗೌಡರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಇದೀಗ ವಿಧಾನಸಭಾ ಚುನಾವಣೆಯಲ್ಲಿ ಕುಣಿಗಲ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲು ನಿರ್ಧರಿಸಿದ್ದಾರೆ. ಇನ್ನು ನಟ ಶಶಿಕುಮಾರ್ ಅವರು ಚಳ್ಳಕೆರೆ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್ ನಿರೀಕ್ಷೆಯಲ್ಲಿದ್ದಾರೆ. ಅನಿಲ್ ಕುಮಾರ್ ಅವರು ಕೊರಟಗೆರೆ ಕ್ಷೇತ್ರದಿಂದ ಸ್ಪರ್ಧೆಗೆ ನಿರ್ಧರಿಸಿದ್ದಾರೆ.



