ದಾವಣಗೆರೆ: ಹೊನ್ನಾಳಿಯ ಶಾಸಕ ಎಂ.ಪಿ ರೇಣುಕಾಚಾರ್ಯ ಅವರ ಸಹೋದರ ಪುತ್ರ ಚಂದ್ರಶೇಖರ್ ಕಾರು ಭದ್ರಾ ಕಾಲುವೆಯಲ್ಲಿ ಪತ್ತೆಯಾಗಿದ್ದು, ಕಾರಿನಲ್ಲಿ ಚಂದ್ರು ಶವವಾಗಿ ಪತ್ತೆಯಾಗಿದೆ.
ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ. ರೇಣುಕಾಚಾರ್ಯ ಸೋದರ ಪುತ್ರ ಭಾನುವಾರ ನಾಪತ್ತೆ ಆಗಿದ್ದರು. ಕಳೆದ ನಾಲ್ಕೈದು ದಿನದಿಂದ ಎಲ್ಲ ಕಡೆ ಹುಡುಕಾಟ ನಡೆಸಲಾಗಿತ್ತು. ಇದೀಗ ತುಂಗಾ ಕಾಲುವೆಯಲ್ಲಿ ಕಾರು ಬಿದ್ದಿದೆ. ಈ ಕಾರನ್ನು ಅಗ್ನಿಶಾಮಕ ಸಿಬ್ಬಂದಿ ಕಾರು ಮೇಲೆ ಎತ್ತಿದ್ದಾಗ ಚಂದ್ರಶೇಖರ್ ಮೃತದೇಹ ಪತ್ತೆಯಾಗಿದೆ.
ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಕಡದಕಟ್ಟೆ ಗ್ರಾಮದ ತುಂಗಾ ಕಾಲುವೆಗೆ ಚಂದ್ರಶೇಖರ್ ಕಾರು ಬಿದ್ದಿರುವುದು ಖಾತ್ರಿಯಾಗಿದೆ. ಕ್ರೇನ್ ಮೂಲಕ ಕಾರನ್ನು ಮೇಲಕ್ಕೆ ಎತ್ತಲಾಗಿದೆ. ಐದು ದಿನಗಳಿಂದ ನಾಪತ್ತೆಯಾಗಿರುವ ಚಂದ್ರಶೇಖತ್ ಪತ್ತೆಗೆ ಪೊಲಿಸರು ತೀವ್ರ ಹುಡುಕಾಟ ನಡೆಸಿದರು. ಚಂದ್ರಶೇಖರ್ ನಾಪತ್ತೆಯಿಂದ ಕುಟುಂಬಸ್ಥರು ಕಂಗಾಲಾಗಿದ್ದರು. ಅಣ್ಣನ ಮಗ ನಾಪತ್ತೆಯಿಂದ ಶಾಸಕ ರೇಣುಕಾಚಾರ್ಯ ಕಣ್ಣೀರು ಹಾಕಿದ್ದರು.



