ದಾವಣಗೆರೆ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಬೌದ್ದ, ಸಿಖ್, ಪಾರ್ಸಿ ವಿದ್ಯಾರ್ಥಿಗಳಿಗೆ 2022-23ನೇ ಸಾಲಿಗೆ ವಿಶೇಷ ಪ್ರೋತ್ಸಾಹಧನ ನೀಡಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಡಿ.ಎಡ್ ಹಾಗೂ ಬಿ.ಎಡ್ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಡಿಸೆಂಬರ್ 10 ಕೊನೆಯದಿನವಾಗಿದೆ. ಸೇವಾಸಿಂಧು ಪೋರ್ಟಲ್‍ನಲ್ಲಿ http://sevasindhu.karnataka.in ನೋಡಬಹುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 8277799990 ಮತ್ತು ಸಂಬಂಧಪಟ್ಟ ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ದೂ.ಸಂ:08392-250066/250022ನ್ನು ಸಂಪರ್ಕಿಸಬಹುದೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



