ದಾವಣಗೆರೆ: ವಿದ್ಯಾ ನಗರ ಲಯನ್ಸ್ ಕ್ಲಬ್ ವತಿಯಿಂದ ಎಸ್ ಎಸ್ ನಾರಾಯಣ ಹಾರ್ಟ್ ಸೆಂಟರ್ ಮತ್ತು ಮೆಡಿ ಹೌಸ್ ಸಹಕಾರದೊಂದಿಗೆ ವಿದ್ಯಾನಗರದ ಲಯನ್ಸ್ ಸೇವಾ ಭವನದಲ್ಲಿ ಬೃಹತ್ ಹೃದಯ ತಪಾಸಣೆ, ರಕ್ತದೊತ್ತಡ ಮತ್ತು ಮಧುಮೇಹ ಪರೀಕ್ಷಾ ಶಿಬಿರ ನಡೆಸಲಾಯಿತು. ಈ ಶಿಬಿರದಲ್ಲಿ ಸುಮಾರು 175 ಜನ ರಕ್ತ ತಪಾಸಣೆ ಮಾಡಿಸಿಕೊಂಡರು ಮತ್ತು 100 ಕ್ಕಿಂತ ಹೆಚ್ಚು ಸಾರ್ವಜನಿಕರು ಹೃದಯ ತಪಾಸಣೆ ಮಾಡಿಸಿಕೊಂಡರು. ಹೃದಯ ತಪಾಸಣೆಯಲ್ಲಿ 18 ಜನರಿಗೆ ಹೆಚ್ಚಿನ ತಪಾಸಣೆಗೆ ಆಸ್ಪತ್ರೆಗೆ ಹಾಜರಾಗಲು ವೈದ್ಯರು ಸೂಚಿಸಿದರು
ಈ ಸಂದರ್ಭದಲ್ಲಿ ಕ್ಲಬ್‌ನ ಅಧ್ಯಕ್ಷ ಬಿ.ದಿಳ್ಯಪ್ಪ, ಮಾಜಿ ಜಿಲ್ಲಾ ಗವರ್ನರ್ ಎ.ಆರ್.ಉಜ್ಜನಪ್ಪ ಇದ್ದರು. ಮಾಜಿ ಜಿಲ್ಲಾ ಗವರ್ನರ್ ಹೆಚ್.ಎನ್. ಶಿವಕುಮಾರ್ ಮಾತನಾಡಿ ಹಿರಿಯ ನಾಗರಿಕರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಈ ಶಿಬಿರವನ್ನು ಕ್ಲಬ್‌ನಿಂದ ಏರ್ಪಡಿಸಲಾಗಿತ್ತು. ಈ ಶಿಬಿರದಲ್ಲಿ ಅತೀ ಹೆಚ್ಚು ಸಾರ್ವಜನಿಕರ ಪಾಲುಗೊಳ್ಳುವಿಕೆಯಿಂದ ಶಿಬಿರ ಯಶಸ್ವಿಯಾಗಿದೆ. ಹಾಗೂ ಈ ಶಿಬಿರ ನಡೆಸಲು ಸಹಕರಿಸಿದ ಎಸ್.ಎಸ್.ನಾರಾಯಣ ಹಾರ್ಟ್ ಸೆಂಟರಿನ ವೈದ್ಯರು, ಸಿಬ್ಬಂದಿ ವರ್ಗದವರು ಹಾಗೂ ಮೆಡಿ ಹೌಸ್ ಸಿಬ್ಬಂದಿ ವರ್ಗದವರ ಸಹಕಾರವನ್ನು ಸ್ಮರಿಸಿ ಅವರಿಗೆ ಅಭಿನಂದನೆ ತಿಳಿಸಿದರು. ಈ ಶಿಭಿರವನ್ನು ಪ್ರಾಯೋಜಿಸಿದ ಲಯನ್ ಎಲ್.ಎಸ್.ಪ್ರಭುದೇವ್ ಅವರನ್ನು ಅಭಿನಂದಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಖಜಾಂಜಿ ಶೀತಲ್, ಲಯನ್ ಮಹೇಂದ್ರ ಕುಮಾರ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ವಾಮದೇವಪ್ಪ, ರೋಟರಿ ಅಧ್ಯಕ್ಷ ರೊ ಸಿ.ಕೆ.ಸಿದ್ದಪ್ಪ, ಎಂ.ಜಿ.ಈಶ್ವರಪ್ಪ ಮತ್ತಿತರರು ಭಾಗವಹಿಸಿದ್ದರು.



