ದಾವಣಗೆರೆ: ಕೆನರಾ ಬ್ಯಾಂಕ್ ಎಂಪ್ಲಾಯೀಸ್ ಯೂನಿಯನ್‌ನ ಅಖಿಲ ಭಾರತ ಸಹ ಖಜಾಂಚಿಯಾಗಿ ದಾವಣಗೆರೆಯ ಕೆ.ರಾಘವೇಂದ್ರ ನಾಯರಿ ಅವರು ನೇಮಕವಾಗಿದ್ದಾರೆ. ನವೆಂಬರ್ 16 ಹಾಗೂ 17 ರಂದು ಕೇರಳದ ಎರ್ನಾಕುಲಂನಲ್ಲಿ ನಡೆದ ಯೂನಿಯನ್‌ನ ಕೇಂದ್ರ ಸಮಿತಿ ಸಭೆಯಲ್ಲಿ ಈ ನೇಮಕ ಮಾಡಲಾಗಿದೆ. ಇತ್ತೀಚಿಗೆ ಕರ್ನಾಟಕ ಪ್ರದೇಶ ಗ್ರಾಮೀಣ ಬ್ಯಾಂಕ್ ಎಂಪ್ಲಾಯೀಸ್ ಫೆಡರೇಷನ್‌ನ ಅಧ್ಯಕ್ಷರಾಗಿ ಕೆಪಿಬಿಇಎಫ್ ನಿಂದ ನೇಮಕವಾಗಿದ್ದಾರೆ ಎಂದು ಕೆನರಾ ಬ್ಯಾಂಕ್ ಎಂಪ್ಲಾಯೀಸ್ ಯೂನಿಯನ್‌ನ ರಾಜ್ಯ ಸಮಿತಿ ಸದಸ್ಯ ಕೆ.ವಿಶ್ವನಾಥ್ ಬಿಲ್ಲವ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲೆಗೆ ಪ್ರಪ್ರಥಮ ಬಾರಿಗೆ ಈ ಹುದ್ದೆಯು ದೊರೆತಿರುವುದು ಜಿಲ್ಲಾ ಬ್ಯಾಂಕ್ ನೌಕರರ ಸಂಘಕ್ಕೆ ಮತ್ತು ಜಿಲ್ಲೆಯ ಬ್ಯಾಂಕ್ ಉದ್ಯೋಗಿಗಳಿಗೆ ಹೆಮ್ಮೆಯ ವಿಷಯವಾಗಿದೆ. ಕೆ.ರಾಘವೇಂದ್ರ ನಾಯರಿಯವರು ಪ್ರಸ್ತುತ ಕರ್ನಾಟಕ ಪ್ರದೇಶ ಬ್ಯಾಂಕ್ ಎಂಪ್ಲಾಯೀಸ್ ಫೆಡರೇಶನ್‌ನ ಜಂಟಿ ಕಾರ್ಯದರ್ಶಿಯಾಗಿ, ದಾವಣಗೆರೆ ಜಿಲ್ಲಾ ಬ್ಯಾಂಕ್ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ, ಕೆನರಾ ಬ್ಯಾಂಕ್ ನೌಕರರ ಸಂಘದ ರಾಜ್ಯ ಸಹ ಕಾರ್ಯದರ್ಶಿಯಾಗಿ ಹಾಗೂ ಅಸಂಘಟಿತ ಕಾರ್ಮಿಕ ವಲಯದ ಮುಖಂಡರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಜಿಲ್ಲಾ ಬ್ಯಾಂಕ್ ನೌಕರರ ಸಂಘದ ಖಜಾಂಚಿಯೂ ಆಗಿರುವ ಕೆ.ವಿಶ್ವನಾಥ್ ಬಿಲ್ಲವ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



