ದಾವಣಗೆರೆ: ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‍ರಾಜ್ ಇಲಾಖೆಗೆ ಸಂಬಂಧಿಸಿದಂತೆ ಅಕ್ಟೋಬರ್-2022ರ ಅಂತ್ಯಕ್ಕೆ ಬೆಸ್ಕಾಂ ದಾವಣಗೆರೆ ವಿಭಾಗದ ಗ್ರಾಮೀಣ ಉಪ ವಿಭಾಗ ವ್ಯಾಪ್ತಿಯಲ್ಲಿನ 21ಗ್ರಾಮ ಪಂಚಾಯತಿಗಳಲ್ಲಿ ಕುಡಿಯುವನೀರು ಮತ್ತು ಬೀದಿ ದೀಪ ಸ್ಥಾವರಗಳ ವಿದ್ಯುತ್ ಬಾಕಿ ಮೊತ್ತವನ್ನು ಏಳು ದಿನಗಳ ಒಳಗಾಗಿ ಪಾವತಿಸುವಂತೆ ಬೆಸ್ಕಾಂ ಸೂಚಿಸಿದೆ.
ವಿದ್ಯುತ್ ಶುಲ್ಕ ಬಾಕಿ ಮೊತ್ತ 7 ದಿನಗಳ ಒಳಗಾಗಿ ಪಾವತಿಸದೇ ಇದ್ದಲ್ಲಿ ಅನಿವಾರ್ಯವಾಗಿ ಪಿಡಿಓ ಗ್ರಾಮಪಂಚಾಯಿತಿ ವ್ಯಾಪ್ತಿಗೆ ಬರುವಬೀದಿ ದೀಪ ವಿದ್ಯುತ್ ಸ್ಥಾವರಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುವುದು. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅಗುವ ತೊಂದರೆಗೆ ಬೆಸ್ಕಾಂ ಗ್ರಾಮೀಣ ಉಪ ವಿಭಾಗ ದಾವಣಗೆರೆ ಜವಾಬ್ದಾರರಾಗುವುದಿಲ್ಲ ಎಂದು ಗ್ರಾಮೀಣ ಉಪವಿಭಾಗದ ಸಹಾಯಕಕಾರ್ಯ ನಿರ್ವಾಹಕಇಂಜಿನಿಯರ್(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



