ದಾವಣಗೆರೆ: ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಹಾಗೂ ಲಲಿತಾ ಪದವಿ ಪೂರ್ವ ಕಾಲೇಜು ಸಹಯೋಗದಲ್ಲಿ ನಾಳೆಯಿಂದ (ನ.21) ಮೂರು ದಿನ ಪಿಜೆ ಬಡಾವಣೆಯ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ರಾಜ್ಯಮಟ್ಟದ ಪದವಿ ಪೂರ್ವ ಕಾಲೇಜು ಬ್ಯಾಸ್ಕೆಟ್ ಬಾಲ್ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಡಿಡಿಪಿಯು ಎಂ.ಶಿವರಾಜ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನ.21ರಂದು ಕ್ರೀಡಾಪಟುಗಳು ವರದಿ ಮಾಡಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ರಾಜ್ಯದ ಎಲ್ಲ ಜಿಲ್ಲೆಗಳಿಂದ ಕ್ರೀಡಾಪಟುಗಳು ಆಗಮಿಸಲಿದ್ದಾರೆ.ಕ್ರೀಡಾಕೂಟದಲ್ಲಿ 792 ಕ್ರೀಡಾಪಟುಗಳು ಹಾಗೂ 66 ವ್ಯವಸ್ಥಾಪಕರು ಭಾಗವಹಿಸಲಿದ್ದಾರೆ. ಹೊರ ಜಿಲ್ಲೆಗಳಿಂದ ಆಗಮಿಸುವ ಕ್ರೀಡಾಪಟುಗಳಿಗೆ ಊಟ ವಸತಿಬಸೌಲಭ್ಯ ಕಲ್ಪಿಸಲಾಗಿದೆ.
ನ.22ರಂದು ಬೆಳಗ್ಗೆ 10 ಕ್ಕೆ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ. ಶಾಸಕ ಎಸ್. ಎ. ರವೀಂದ್ರನಾಥ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದ ಜಿ.ಎಂ.ಸಿದ್ದೇಶ್ವರ,ಶಾಸಕರುಗಳಾದ ಮಾಡಾಳು ವಿರೂಪಾಕ್ಷಪ್ಪ, ಎಂ.ಪಿ.ರೇಣುಕಾಚಾರ್ಯ,ಎಸ್.ವಿ ರಾಮಚಂದ್ರ ಮತ್ತಿತರ ಗಣ್ಯರು ಆಗಮಿಸಲಿದ್ದಾರೆ. ನ.22ಹಾಗೂ 23 ರಂದು ಬೆಳಗ್ಗೆ 7 ರಿಂದ ರಾತ್ರಿ 8.30ರವರೆಗೆ ಕ್ರೀಡಾಕೂಟಗಳು ನಡೆಯಲಿದೆ ಎಂದರು.



