ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕಾಂಗ್ರೆಸ್ ಪಕ್ಷ ಕೆಲ ಜಿಲ್ಲೆಯಲ್ಲಿ ಮಹತ್ವದ ಬದಲಾವಣೆಗೆ ಮುಂದಾಗಿದೆ. ಐದು ಜಿಲ್ಲೆಗಳಿಗೆ ನೂತನ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಿ ಆದೇಶಿಸಲಾಗಿದೆ.
ಈ ಸಂಬಂಧ ಕಾಂಗ್ರೆಸ್ ಪಕ್ಷದ ಕೆ.ಸಿ ವೇಣುಗೋಪಾಲ್ ಆದೇಶ ಹೊರಡಿಸಿದ್ದಾರೆ. ಈ ಕೂಡಲೇ ಜಾರಿಗೆ ಬರುವಂತೆ ಕೆಪಿಸಿಸಿಯಿಂದ ಈ ಕೆಳಕಂಡ ಐದು ಜಿಲ್ಲೆಗಳಲ್ಲಿ ಜಿಲ್ಲಾಧ್ಯಕ್ಷರನ್ನು ನೇಮಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿ ಆರ್ ಗೌಡ, ಯಾದಗಿರಿ-ಬಸರೆಡ್ಡಿ, ಕೊಡಗು – ಧರ್ಮಜ ಉತ್ತಪ್ಪ, ತುಮಕೂರು-ಚಂದ್ರಶೇಖರ್ ಗೌಡ ಹಾಗೂ ಹಾಸನ ಜಿಲ್ಲಾಧ್ಯಕ್ಷರನ್ನಾಗಿ ಇ ಹೆಚ್ ಲಕ್ಷ್ಮಣ್ ಅವರನ್ನು ನೇಮಕ ಮಾಡಲಾಗಿದೆ.



