ದಾವಣಗೆರೆ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಘಟನೆ ಚನ್ನಗಿರಿಯಲ್ಲಿ ನಡೆದಿದೆ.
ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಕೊಡಗೀಕೆರೆ ಗ್ರಾಮದ ಕ್ರಾಸ್ ಬಳಿ ಈ ಘಟನೆ ನಡೆದಿದೆ. ಶಿವಮೊಗ್ಗದಿಂದ ಶಿವನಿಗೆ ಹೋಗುತ್ತಿದ್ದ ಬಸ್ ವೇಗವಾಗಿ ಬಂದಿದ್ದು ಕೊಡಗೀಕೆರೆ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ನಿನ್ನೆ (ನ.25) ರಾತ್ರಿ ಈ ಘಟನೆ ನಡೆದಿದೆ. ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಪ್ರಾಣ ಹಾನಿಯಾಗಿಲ್ಲ. ಕೆಲ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಚನ್ನಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.