ದಾವಣಗೆರೆ: ಜಿಲ್ಲೆಯ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ವಿರುದ್ಧ ದೂರು ದಾಖಲಿಸಿದ್ದ ಗ್ರಾಮ ಲೆಕ್ಕಿಗ ಪ್ರಶಾಂತ್ ಕುಮಾರ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಗ್ರಾಮಲೆಕ್ಕಿಗ ಪ್ರಶಾಂತ್ ಕುಮಾರ್ ವರ್ಗಾವಣೆ ಮಾಡಲಾಗಿದೆ. ಕೋಗನಹಳ್ಳಿ ಗ್ರಾಮದಲ್ಲಿ ಮಳೆಗೆ ಹಾನಿಯಾದ ಮನೆಗಳ ಸರ್ವೆ ವಿಚಾರದಲ್ಲಿ ಸರ್ಕಾರಿ ಕೆಲಸಕ್ಕೆ ಅಡ್ಡಿ ಮಾಡಿದ ಆರೋಪದಡಿ ಹಿನ್ನಲೆ ನವೆಂಬರ್ 15 ರಂದು ಶಾಸಕ ರೇಣುಕಾಚಾರ್ಯ ವಿರುದ್ಧ ಪ್ರಶಾಂತದ ಕುಮಾರ್ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.