ದಾವಣಗೆರೆ: ನೀರು ತುಂಬಿದ ಬಕೆಟ್ ಗೆ ಬಿದ್ದು, 10 ತಿಂಗಳ ಮಗುವೊಂದು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಜಗಳೂರಲ್ಲಿ ನಡೆದಿದೆ.
ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಬಿಸ್ತುವಳ್ಳಿ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಗ್ರಾಮದ ಮಂಜುನಾಥ್ ಹಾಗೂ ತಾರಾ ದಂಪತಿಯ 10 ತಿಂಗಳ ಹೆಣ್ಣು ಮಗು ಮೃತಪಟ್ಟಿದ್ದು, ಆಟವಾಡುತ್ತಿದ್ದ ವೇಳೆ ನೀರು ತುಂಬಿದ ಬಕೆಟ್ ಗೆ ಬಿದ್ದು ಸಾವನ್ನಪ್ಪಿದೆ. ಪೋಷಕರು ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಮಾರ್ಗ ಮಧ್ಯದಲ್ಲಿ ಮಗು ಸಾವನ್ನಪ್ಪಿದೆ.