ಶಿವಮೊಗ್ಗ: ಲಾರಿ-ಕಾರು ನಡುವೆ ಭೀಕರ ಅಪಘಾತ ಸಂಭವಿಸಿದೆ. ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತಪಟ್ಟಿರುವ ದಾರುಣ ಘಟನೆಯು ನಡೆದಿದೆ.
ಶಿವಮೊಗ್ಗದ ಕಲ್ಲುಕೊಪ್ಪ ಬಳಿ ಈ ದುರ್ಘಟನೆ ನಡೆದಿದೆ.ಭೀಕರ ಅಪಘಾತದಲ್ಲಿ ದಾವಣಗೆರೆ ಮೂಲದ ಇಂಜಿನಿಯರಿಂಗ್ ಕಾಲೇಜ್ ವಿದ್ಯಾರ್ಥಿಗಳು ಎಂದು ಪತ್ತೆ ಹಚ್ಚಲಾಗಿದೆ. ಮೃತರನ್ನ ಕಾರ್ತಿಕ್, ವಿವೇಕ್, ಮೋಹನ್ ಎಂದು ಗುರುತಿಸಲಾಗಿದೆ. ರುದ್ರೇಶ್ ಪಾಟೀಲ್ ಎಂಬುವರಿಗೆ ಗಂಭೀರ ಗಾಯಗಳಾಗಿದೆ. ರುದ್ರೇಶ್ ಪಾಟೀಲ್ ಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಿದಲಾಗಿದೆ.
ಶಿವಮೊಗ್ಗದಿಂದ ದಾವಣಗೆರೆ ಕಡೆ ಪ್ರಯಾಣಿಸುತ್ತಿದ್ದ ಕಾರು ಹಾಗೂ ಶಿವಮೊಗ್ಗಕ್ಕೆ ತೆರಳುತ್ತಿದ್ದ ಲಾರಿ ನಡುವೆ ಅಪಘಾತವಾಗಿದೆ. ಘಟನೆ ವೇಳೆ ಕಾರು ಜಖಂಗೊಂಡಿದ್ದು, ಅದರಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆ ನಂತರ ಲಾರಿ ಚಾಲಕ ಅಲ್ಲಿಂದ ಪರಾರಿಯಾಗಿದ್ದಾನೆ. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.