ದಾವವಣಗೆರೆ: ಅತಿ ವೇಗವಾಗಿ ಬಂದ ಬೈಕ್, ಟ್ರ್ಯಾಕ್ಟರ್ ಹಿಂಭಾಗಕ್ಕೆ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲಿಯೇ ಬೈಕ್ ಸಾವರ ಸಾವನ್ನಪ್ಪಿದ ಘಟನೆ ನಡೆದಿದೆ.
ದಾವಣಗೆರೆ ತಾಲ್ಲೂಕಿನ ಮತ್ತಿ ಗ್ರಾಮದ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಮಿಯಾಪುರ ಗ್ರಾಮದ ವ್ಯಕ್ತಿ ಸಾವನ್ನಪ್ಪಿದ್ದಾನೆ. ಅತಿ ವೇಗವಾಗಿ ಚಾಲನೆಯಲ್ಲಿದ್ದ ಬೈಕ್ ಟ್ರ್ಯಾಕ್ಟರ್ ಟ್ರಾಲಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಸವಾರ ಸಾವನ್ನಪ್ಪಿದ್ದಾನೆ. ಘಟನೆಯಲ್ಲಿ ಇನ್ನೊಬ್ಬನಿಗೆ ಗಂಭೀರ ಗಾಯಗಳಾಗಿವೆ.