ಮೈಸೂರು: ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ವಿರುದ್ಧ ಜಾಗತಿಕ ಲಿಂಗಾಯತ ಮಹಾಸಭಾದ ಎಸ್.ಎಂ ಜಾಮದಾರ ಕಿಡಿಕಾರಿದ್ದಾರೆ.
ಮೈಸೂರಲ್ಲಿ ಮಾತನಾಡಿದ ಅವರು, ಶಾಮನೂರು ಶಿವಶಂಕರಪ್ಪ ಅವರು ನನ್ನ ವಿರುದ್ಧ ಏಕ ವಚನದಲ್ಲಿ ಮಾತನಾಡಿದ್ದಾರೆ. ಅದು ಅವರ ಸಂಸ್ಕೃತಿ ತೋರಿಸುತ್ತದೆ. ನನ್ನ ವೃತ್ತಿ ಜೀವನದಲ್ಲಿ ಭ್ರಷ್ಟಾಚಾರ ಮಾಡಿದ್ದನ್ನು ತೋರಿಸಿದರೆ ಅವರ ಗುಲಾಮನಾಗಿ ಇರುತ್ತೇನೆ ಎಂದು ಸವಾಲು ಹಾಕಿದರು.
ಶಾಮನೂರು ಶಿವಶಂಕರಪ್ಪ ಅವರ ಭ್ರಷ್ಟಾಚಾರವನ್ನು ಒಂದೊಂದಾಗಿ ಬಯಲಿಗೆ ಎಳೆಯುತ್ತೇನೆ. ಬೆಂಗಳೂರಲ್ಲಿ ರಾಜಕಾಲುವೆ ಒತ್ತುವರಿ ಮಾಡಿ ಆಸ್ಪತ್ರೆ ಕಟ್ಟಿದ್ದಾರೆ ಎಂದು ಆರೋಪಿಸಿದರು.



