ದಾವಣಗೆರೆ: ಯುವತಿಯನ್ನು ನಡು ರಸ್ತೆಯಲ್ಲಿ ಹಾಡಹಗಲೇ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿ, ಬೈಕ್ ನಲ್ಲಿ ಪರಾರಿಯಾಗಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಸಾದತ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ
ನಗರ ಪಿ.ಜೆ. ಬಡಾವಣೆಯ ಚರ್ಚ್ ಬಳಿ ನಿನ್ನೆ (ಡಿ.22) ಚಾಂದ್ ಸುಲ್ತಾನ್(28) ಯುವತಿಯನ್ನು ಚಾಕುನಿಂದ ಇರಿದು ಹತ್ಯೆ ಮಾಡಲಾಗಿತ್ತು. ಈ ಕೃತ್ಯ ಇಡೀ ದಾವಣಗೆರೆ ಜನರನ್ನೇ ಬೆಚ್ಚಿಬೀಳಿಸಿತ್ತು. ಯುವತಿ ಕೊಲೆ ನಂತರ ಆರೋಪಿ ಸಾದಾತ್ ನಂತರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದ. ವಿಚಾರ ತಿಳಿದು ಪೊಲೀಸರು ಆತನನ್ನು ದಾವಣಗೆರೆ ಸಿಟಿ ಸೆಂಟ್ರಲ್ ಆಸ್ಪತ್ರೆ ಗೆ ದಾಖಲು ಮಾಡಿದ್ದರು. ಚಿಕಿತ್ಸೆ ಫಲಿಸದೇ ಆತ ಇಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.



