ದಾವಣಗೆರೆ: ಗಾಂಧಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗೋಕುಲ್ ಹೋಟೆಲ್ ಬಳಿ ಮಟ್ಕಾ ಜೂಜು ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿದ್ದು ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
ಡಿವೈಎಸ್ ಪಿ ಬಿ.ಎಸ್. ಬಸವರಾಜ ಮತ್ತು ಪೊಲೀಸ್ ಸಿಬ್ಬಂದಿ ದಾಳಿ ಮಾಡಿದ್ದು, ಮೂವರು ಆರೋಪಿಗಳಿಂದ 11,100 ರೂಪಾಯಿ ನಗದು , ಒಸಿ ಕಾರ್ಡ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.



