ದಾವಣಗೆರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆ ಸಹಯೋಗದಲ್ಲಿ ಡಿ.29 ಮತ್ತು 30 ರಂದು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕತಿಕ ಸ್ಪರ್ಧೆಗಳು ಜರುಗಲಿವೆ.
ಡಿ.29 ರಂದು ಬೆಳಿಗ್ಗೆ 10-30ಕ್ಕೆ ಜಿಲ್ಲಾ ಕ್ರೀಡಾಂಗಣದಲ್ಲಿ ಕ್ರೀಡಾಕೂಟಕ್ಕೆ ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ ಬಸವರಾಜ ಚಾಲನೆ ನೀಡಲಿದ್ದಾರೆ. ವಿಧಾನಸಭಾ ಶಾಸಕ ಎಸ್.ಎ ರವೀಂದ್ರನಾಥ್ ಅಧ್ಯಕ್ಷತೆ ವಹಿಸಲಿದ್ದಾರೆ.
ಲೋಕಸಭಾ ಕ್ಷೇತ್ರದ ಸಂಸದ ಜಿ.ಎಂ ಸಿದ್ದೇಶ್ವರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ. ರೇಣುಕಾಚಾರ್ಯ, ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ ಅಧ್ಯಕ್ಷರು ಮತ್ತು ನಿರ್ದೇಶಕರು ಹಾಗೂ ಚನ್ನಗಿರಿ ಕ್ಷೇತ್ರದ ಶಾಸಕ ಕೆ. ಮಾಡಾಳ್ ವಿರೂಪಾಕ್ಷಪ್ಪ, ಡಾ.ಬಾಬುಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ಮಾಯಕೊಂಡ ಕ್ಷೇತ್ರದ ಶಾಸಕ ಪ್ರೊ.ಲಿಂಗಣ್ಣ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಅಧ್ಯಕ್ಷರು ಹಾಗೂ ಜಗಳೂರು ಕ್ಷೇತ್ರದ ಶಾಸಕ ಎಸ್.ವಿ.ರಾಮಚಂದ್ರ ಅವರು ಭಾಗವಹಿಸಲಿದ್ದಾರೆ.
ಮುಖ್ಯತಿಥಿಗಳಾಗಿ ಶಾಸಕ ಶಾಮನೂರು ಶಿವಶಂಕರಪ್ಪ, ವಿಧಾನಪರಿಷತ್ ಸದಸ್ಯರುಗಳಾದ ಮೋಹನ್ ಕುಮಾರ್ ಕೊಂಡಜ್ಜಿ, ಎಸ್.ರಾಮಪ್ಪ, ಕೆ.ಪಿ.ನಂಜುಂಡಿ ವಿಶ್ವಕರ್ಮ, ರವಿಕುಮಾರ್ ಎನ್., ಡಾ.ತೇಜಸ್ವಿನಿಗೌಡ, ಆಯನೂರು ಮಂಜುನಾಥ್, ಎಸ್.ಎಲ್.ಭೋಜೆಗೌಡ, ಆರ್.ಶಂಕರ್, ಚಿದಾನಂದ ಎಂ.ಗೌಡ, ಡಿ.ಎಸ್.ಅರುಣ್, ಕೆ.ಎಸ್ ನವೀನ್, ಕೆ.ಅಬ್ದುಲ್ ಜಬ್ಬಾರ್, ಕೇಂದ್ರ ಪರಿಹಾರ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರಾದ ಬಸವರಾಜ ನಾಯಕ ಮಹಾನಗರಪಾಲಿಕೆ ಮಹಾಪೌರರ ಆರ್ ಜಯಮ್ಮ ಗೋಪಿನಾಯಕ್, ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರಕಾಶ್ ಎ.ವೈ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್.ಆರ್ ಉಮಾಶಂಕರ್ ಸೇರಿದಂತೆ ಜಿಲ್ಲಾಧಿಕಾರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರು, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಮಹಾನಗರಪಾಲಿಕೆ ಆಯುಕ್ತರು ಪಾಲ್ಗೊಳ್ಳಲಿದ್ದಾರೆ. ಡಿಸೆಂಬರ್ 30ರ ಸಂಜೆ 05 ಗಂಟೆಗೆ ಸರ್ಕಾರಿ ನೌಕರರ ಸಮುದಾಯದ ಭವನದಲ್ಲಿ ಸಾಂಸ್ಕತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ಪ್ರಕಟಣೆ ತಿಳಿಸಿದೆ.



