ಬೆಂಗಳೂರು: ಆಕಸ್ಮಿಕವಾಗಿ ತಗುಲಿದ ಬೆಂಕಿಗೆ ನಿಂತಿದ್ದ SRS ಟ್ರಾವೆಲ್ಸ್ ಗೆ ಸೇರಿದ ಮೂರು ಬಸ್ಗಳು ಬೆಂಕಿಗೆ ಆಹುತಿಯಾದ ಘಟನೆ ನಗರದ ಮೈಸೂರು ರಸ್ತೆಯ ಆರ್.ವಿ.ಇಂಜಿನಿಯರಿಂಗ್ ಕಾಲೇಜ್ ಬಳಿ ನಡೆದಿದೆ.
ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಎಸ್ಆರ್ಎಸ್ ಸಂಸ್ಥೆಗೆ ಸೇರಿದ್ದ ಮೂರು ಬಸ್ಗಳನ್ನು ಖಾಲಿ ಜಾಗದಲ್ಲಿ ಪಾರ್ಕ್ ಮಾಡಲಾಗಿತ್ತು. ಈ ವೇಳೆ ಏಕಾಏಕಿ ಬಸ್ ನಲ್ಲಿ ಬೆಂಕಿ ಹೊತ್ತಿಕೊಂಡು ಧಗ ಧಗ ಹೊತ್ತಿ ಉರಿದಿವೆ. ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ.



