ದಾವಣಗೆರೆ: ಚೆಕ್ ಬೌನ್ಸ್ ಪ್ರಕರಣದಲ್ಲಿ ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದ ಜಿಲ್ಲೆಯ ಹೊನ್ನಾಳಿ ಪೊಲೀಸ್ ಠಾಣೆಯ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಭರತ್ ವಿರುದ್ಧ ಲೋಕಾಯುಕ್ತದಲ್ಲಿ ಕೇಸ್ ದಾಖಲಾಗಿದೆ. ಈ ಹಿನ್ನಲೆ ಭರತ್ ವಿರುದ್ಧ ಪೊಲೀಸ್ ಇಲಾಖೆ ಶಿಸ್ತು ಕ್ರಮ ಕೈಗೊಳ್ಳಲಿದೆ ಎಂದು ಎಸ್ ಪಿ ರಿಷ್ಯಂತ್ ಹೇಳಿದ್ದಾರೆ.
ಈ ಬಗ್ಗೆ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಈ ಪ್ರಕರಣದಲ್ಲಿ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಹಾಗೂ ಲಂಚದ ಹಣ ಪಡೆಯಲು ಸಹಕರಿಸಿದ ಸಂಬಂಧಿ ಸುರೇಶ ವಿರುದ್ಧ ಲೋಕಾಯುಕ್ತ ಪ್ರಕರಣ ದಾಖಲಾಗಿದೆ. ಹೆಡ್ ಕಾನ್ಸ್ಟೇಬಲ್ ಭರತ್ ರವರ ವಿರುದ್ಧ ಇಲಾಖಾ ಶಿಸ್ತು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.



