ದಾವಣಗೆರೆ; ವನ್ಯಜೀವಿ ಪತ್ತೆ ಪ್ರಕರಣ ಹಿನ್ನಲೆ ಹೋರಾಟ ಮಾಡುತ್ತಿರುವ ಬಿಜೆಪಿ ನಾಯಕರಿಗೆ ಮಾಡಲು ಬೇರೆ ಕೆಲಸವಿಲ್ಲ. ಹೀಗಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಇವರು ಏನಾದ್ರೂ ಒಂದು ಆಕಳು, ಕುದುರೆ, ಎತ್ತು ಸಾಕಿದ್ದಾರೆಯೇ ಎಂದು ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಕಿಡಿಕಾರಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ನಾವು ಹಸು, ಕುದುರೆ, ಎತ್ತುಗಳನ್ನು ಸಾಕುತ್ತಿದ್ದೇವೆ. ಬಿಜೆಪಿಯವರು ಏನು ಸಾಕುತ್ತಿದ್ದಾರೆ? ಹೋರಾಟ ಮಾಡುವ ನಾಯಕರು ಮೊದಲು ಈ ಕೆಲಸ ಮಾಡಲಿ. ಅದನ್ನು ಬಿಟ್ಟು ಪ್ರತಿಭಟನೆ ಮಾಡಿದರೆ ಏನು ಉಪಯೋಗ? ಎಂದು ಪ್ರಶ್ನಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜ ಸೇರಿ ಲಿಂಗಾಯತರಿಗೆ ರಾಜ್ಯ ಸರ್ಕಾರ ಘೋಷಿಸಿರುವ ಮೀಸಲಾತಿ ತಿರುಗ ಮುರುಗ ಆಗಿದೆ. ನಾವು ಅಂದುಕೊಂಡಂತೆ ಮೀಸಲಾತಿ ನೀಡಿಲ್ಲ ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅಸಮಾಧಾನ ವ್ಯಕ್ತಪಡಿಸಿದರು.



