ದಾವಣಗೆರೆ: ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ ಹಿನ್ನೆಲೆ 2.50 ಲಕ್ಷ ಮೌಲ್ಯದ ಮೆಕ್ಕೆಜೋಳ ಬೆಂಕಿಗೆ ಆಹುತಿಯಾದ ಘಟನೆ ಜಿಲ್ಲೆಯ ಮಾಯಕೊಂಡ ವ್ಯಾಪ್ತಿಯ ಹುಚ್ಚವ್ವನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಚಂದ್ರಶೇಖರಪ್ಪ ಎಂಬುವರಿಗೆ ಸೇರಿದ ಮಕ್ಕೆಜೋಳ ಸುಟ್ಟು ಹೋಗಿದೆ. ನಾಲ್ಕು ಎಕರೆಯಲ್ಲಿ ಬೆಳೆದಿದ್ದ ಮೆಕ್ಕೆಜೋಳವನ್ನು ಕೊಯ್ಲು ಮಾಡಿ, ಕಣದಲ್ಲಿ ರಾಶಿ ಹಾಕಿದ್ದರು. ಯಾರು ಕಿಡಿಗೇಡಿಗಳು ತಡ ರಾತ್ರಿ ಬೆಂಕಿ ಹಚ್ಚಿದ ಶಂಕೆ ವ್ಯಕ್ತವಾಗಿದೆ. ಈ ಬಾರಿ ಭಾರೀ ಮಳೆಯಿಂದ ಅತಿ ತೇವಾಂಶದಿಂದ ಕಷ್ಟಪಟ್ಟು ಬೆಳೆದಿದ್ದ ಬೆಳೆ ಕಿಡಿಗೇಡಿಗಳ ಕೃತ್ಯಕ್ಕೆ ಸುಟ್ಟು ಭಸ್ಮವಾಗಿದೆ. ಈ ಸಲ ಮಕ್ಕೆಜೋಳಕ್ಕೆ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಇದೆ. ಚಂದ್ರಶೇಖರಪ್ಪ ಅವರ 2.50 ಲಕ್ಷ ಮೌಲ್ಯದ ಮೆಕ್ಕೆಜೋಳ ಸುಟ್ಟು ಹೋಗಿದ್ದರಿಂದ ನಷ್ಟ ಅನುಭವಿಸಿದ್ದಾರೆ. ಮಾಯಕೊಂಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.



