ದಾವಣಗೆರೆ: ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
2022-23ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಮತ್ತು ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಜ.30 ರೊಳಗಾಗಿ ಅರ್ಜಿ ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗಾಗಿ ಸಂಬಂದಪಟ್ಟ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ವೆಬ್ ಸೈಟ್ https://bcwd.karnataka.gov.in/ದೂ.ಸಂ:08050770005 ಮತ್ತು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ದೂ.ಸಂ: 080-35254757 ಸಂಪರ್ಕಿಸಬಹುದೆಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



