ದಾವಣಗೆರೆ; ಜಿಲ್ಲೆಯ ಹರಿಹರ ತಾಲ್ಲೂಕಿನ ನಂದಿತಾವರೆ ಬಳಿ ಕಾರು- ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರಿಗೆ ಗಾಯವಾಗಿದೆ. ಸ್ಥಳೀಯರು ಬೈಕ್ ಸವಾರನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ನಂದಿತಾವರೆ ಬಸವೇಶ್ವರ ಶಾಲೆ ಬಳಿ ಅಪಘಾತ ಸಂಭವಿಸಿದೆ. ಹೊಯ್ಸಳ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಬೈಕ್ ಸವಾರನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಲೇಬೆನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕಾರಿನಲ್ಲಿರುವವರನ್ನು ಪೊಲೀಸರು ವಶಕ್ಕೆ ಪಡೆಯಲಾಗಿದೆ.