ದಾವಣಗೆರೆ: ನಗರದ ಹೊರ ವಲಯದ ಆವರಗೆರೆ ಬಸ್ ನಿಲ್ದಾಣದಲ್ಲಿ ಮಟ್ಕಾ ಜೂಜಾಟದ ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿದ್ದು, ದಾಳಿಯಲ್ಲಿ ಒಬ್ಬನನ್ನು ಬಂಧಿಸಲಾಗಿದೆ. ಆರೋಪಿಯಿಂದ 4,100 ರೂಪಾಯಿ ಒಸಿ ಚೀಟಿಗಳನ್ನು ವಶಕ್ಕೆ ಪಡೆಯಲಾಗಿದೆ. ಡಿಸಿಆರ್ ಬಿ ಘಟಕದ ಡಿವೈಎಸ್ಪಿ ಬಿ.ಎಸ್. ಬಸವರಾಜ್ ಆದೇಶದ ಮೇರೆಗೆ ಪಿಎಸ್ ಐ ಆಂಜನಪ್ಪ ಮತ್ತು ಸಿಬ್ಬಂದಿ ದಾಳಿ ನಡೆಸಿದ್ದಾರೆ. ಆರ್ ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



