ದಾವಣಗೆರೆ: ಜಿಲ್ಲೆಯ ಹರಿಹರದ ಹನಗವಾಡಿ ಬಳಿಯ ಪಂಚಮಸಾಲಿ ಮಠದಲ್ಲಿ ನಡೆಯುತ್ತಿರುವ ಹರ ಜಾತ್ರೆಯಲ್ಲಿ ಭಾಗವಹಿಸಿದ್ದ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಮುಂದಿನ ಸಿಎಂ ಎಂದು ಅಭಿಮಾನಿಗಳು ಘೋಷಣೆ ಕೂಗಿದರು.
ಹರ ಜಾತ್ರೆಯ ಲಿಂ. ಸಿದ್ದೇಶ್ವರ ಸ್ವಾಮೀಜಿ ಅವರಿಗೆ ನುಡಿ ನಮನ ಕಾರ್ಯಕ್ರಮದಲ್ಲಿ ಭಾಗಿಯಾದ ವಿಜಯೇಂದ್ರಗೆ ಈ ಘೋಷಣೆ ಸ್ವಾಗತ ಕೋರಲಾಯಿತು. ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರಿಗೆ ಕಾರ್ಯಕರ್ತರು ಮುಂದಿನ ಸಿಎಂ ರಾಜಹುಲಿ ಎಂದು ಕೂಗಿದರು.
ನಂತರ ಮಾತನಾಡಿದ ಅವರು, ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರನ್ನು ಸೈಡ್ಲೈನ್ ಮಾಡಲು ಸಾಧ್ಯವೇ ಇಲ್ಲ. ಸೈಡ್ ಲೈನ್ ಮಾಡಿದ್ರೆ, ಸಂಸದೀಯ ಮಂಡಳಿಯಲ್ಲಿ ಸ್ಥಾನ ನೀಡ್ತಿರಲಿಲ್ಲ. ಯಡಿಯೂರಪ್ಪ ಅವರು ಸಕ್ರಿಯ ರಾಜಕಾರಣದಲ್ಲಿರುತ್ತಾರೆ ಎಂದರು.
ಪಕ್ಷ ಯಾವುದೇ ನಿರ್ಧಾರ ಮಾಡಿದ್ರು ಅಲ್ಲಿ ಸ್ಪರ್ಧಿಸುವೆ. ನಾನು ಶಿಕಾರಿಪುರ ಕ್ಷೇತ್ರದಲ್ಲಿ ಓಡಾಡುತ್ತಿರುವೆ. ಪಕ್ಷದ ವಿರುದ್ಧ ಮಾತನಾಡುತ್ತಿರುವ ಬಸನಗೌಡ ಪಾಟೀಲ್ ಯತ್ನಾಳ್ ಬಗ್ಗೆ ಪಕ್ಷದ ವರಿಷ್ಠರು ನಿರ್ಧಾರ ತೆಗೆದುಕೊಳ್ಳುತ್ತಾರೆ. ಸ್ಯಾಂಟ್ರೋ ರವಿ ನಾನು ರಕ್ಷಣೆ ಮಾಡುವುದಾದ್ರೆ ಅವರನ್ನು ಬಂಧನ ಯಾಕೆ ಆಗುತ್ತಿತ್ತು ಎಂದರು.



