ದಾವಣಗೆರೆ: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಗಿನ್ನಿಸ್ ವಿಶ್ವ ದಾಖಲೆಯ ಯೋಗಥಾನ್ಗೆ ಪಂಚಮಸಾಲಿ ಗುರುಪೀಠದ ಶ್ವಾಸಗುರು ವಚನಾನಂದ ಸ್ವಾಮೀಜಿ ಚಾಲನೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಆಯುಷ್ ಟಿ.ವಿ, ಜಿಲ್ಲಾ ಯೋಗ ಒಕ್ಕೂಟ, ದಾವಣಗೆರೆ ಇವರ ಸಹಯೋಗದೊಂದಿಗೆ ಇಂದು ಬೆಳಿಗ್ಗೆ 6 ಗಂಟೆಗೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಯೋಗಥಾನ್ ಗಿನ್ನಿಸ್ ವಿಶ್ವದಾಖಲೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
45 ನಿಮಿಷ ನಿರಂತರವಾಗಿ ನಡೆದ ಯೋಗಾಥಾನ್ನಲ್ಲಿ ವಿವಿಧ ಶಾಲಾ ಕಾಲೇಜ್ಗಳ ವಿದ್ಯಾರ್ಥಿಗಳು, ವಿವಿಧ ಇಲಾಖೆ ಅಧಿಕಾರಿಗಳು, ಸಾರ್ವಜನಿಕರು ಸೇರಿ 8 ಸಾವಿರ ಜನರು ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಸಂಸದ ಜಿ.ಎಂ. ಸಿದ್ದೇಶ್ವರ, ಜಿಲ್ಲಾಧಿಕಾರಿ ಶಿವಾನಂದ ಕಾಪಶಿ, ಎಸ್ ಪಿ ಸಿ ಬಿ ರಿಷ್ಯಂತ್ , ಜಿಲ್ಲಾ ಕಾರ್ಯ ನಿರ್ವಹಣಾ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ ಸಿಬ್ಬಂದಿಗಳು, ವಿಧ್ಯಾರ್ಥಿಗಳು, ಸಾರ್ವಜನಿಕರು ಭಾಗವಹಿಸಿದ್ದರು.



