Connect with us

Dvgsuddi Kannada | online news portal | Kannada news online

ಕಾರು ಅಪಘಾತ: ಶ್ರೀ ಮಹೇಶ ಶಿಚಾರ್ಚಾಯ ಸ್ವಾಮೀಜಿ ಪ್ರಾಣಾಪಾಯದಿಂದ ಪಾರು

ದಾವಣಗೆರೆ

ಕಾರು ಅಪಘಾತ: ಶ್ರೀ ಮಹೇಶ ಶಿಚಾರ್ಚಾಯ ಸ್ವಾಮೀಜಿ ಪ್ರಾಣಾಪಾಯದಿಂದ ಪಾರು

ಡಿವಿಜಿ ಸುದ್ದಿ, ದಾವಣಗೆರೆ: ಬಳ್ಳಾರಿ ಜಿಲ್ಲೆಯ ಕೊಟ್ಟೂರು ನುಗ್ಗೆಹಳ್ಳಿ ಅಯ್ಯನಹಳ್ಳಿ ಹಿರೇಮಠದ ಶ್ರೀ ಮಹೇಶ ಶಿವಾಚಾರ್ಯ ಸ್ವಾಮೀಜಿ ಪ್ರಯಾಣಿಸುತ್ತಿದ್ದ ಕಾರು ದಾವಣಗೆರೆಯ ಬಾತಿ ಸಮೀಪ ಅಪಘಾತವಾಗಿದ್ದು, ಶ್ರೀಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಶ್ರೀ ಮಹೇಶ ಶಿವಾಚಾರ್ಯ ಸ್ವಾಮೀಜಿ ಇಂದು ಕಾರ್ಯಕ್ರಮ ನಿಮಿತ್ತ ಬಾತಿ ತಪೋವನದಲ್ಲಿರುವ ಶ್ರೀ ಶೈಲ ಜಗದ್ಗುರುಗಳ ದರ್ಶನಕ್ಕೆ ಇನ್ನೋವಾ ಕಾರಿನಲ್ಲಿ ಹೊರಟಿದ್ದರು. ಆದರೆ ದಾವಣಗೆರೆಯ ಬಾತಿ ಕೆರೆ ಬಳಿ ಬೆಂಗಳೂರಿನಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ಕೆಎಸ್ಆರ್‌ಟಿಸಿ ಬಸ್ ಹಿಂದಿನಿಂದ ಇನ್ನೋವಾ ಕಾರಿಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಇನ್ನೋವಾ ಕಾರಿನ ಹಿಂಭಾಗ ಸಂಪೂರ್ಣ ಜಖಂಗೊಂಡಿದೆ. ಅದೃಷ್ಟವಶಾತ್ ಸ್ವಾಮೀಜಿಗಳು ಪ್ರಾಣಾಪಾಯದಿಂದ ಪಾರಾಗಿದ್ದು, ಬೇರೊಂದು ವಾಹನದಲ್ಲಿ ಕಾರ್ಯಕ್ರಮಕ್ಕೆ ತೆರಳಿದ್ದಾರೆ. ಈ ಸಂಬಂಧ ದಾವಣಗೆರೆ ಟ್ರಾಫಿಕ್ ಠಾಣೆಯಲ್ಲಿ ದೂರು ದಾಖಲಾಗಿದೆ.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top