ದಾವಣಗೆರೆ: 2021-22ನೇ ಸಾಲಿನಲ್ಲಿ ವಿಜ್ಞಾನ ವಿಭಾಗದಲ್ಲಿ ದ್ವಿತೀಯ ಪಿ.ಯು.ಸಿ ಪಾಸಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಜೆಇಇ ಮತ್ತು ನೀಟ್ ಪ್ರವೇಶ ಪರೀಕ್ಷೆ ಪ್ರಾರಂಭವಾಗುವವರೆಗೂ ವಸತಿಯುತ LONG TERM ತರಬೇತಿಯನ್ನು ಬೆಂಗಳೂರು ಅಥವಾ ಮಂಗಳೂರು ನಗರದಲ್ಲಿ ಆಯೋಜಿಸಲಾಗಿರುತ್ತದೆ.
ಅರ್ಹ ವಿದ್ಯಾರ್ಥಿಗಳು ಇಲಾಖಾ ವೆಬ್‍ಸೈಟ್ www.sw.kar.nic.in ಆನ್‍ಲೈನ್ ಮೂಲಕ ಅರ್ಜಿಗಳನ್ನು ಜನವರಿ 31 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಚೇರಿ ಹಾಗೂ ಸಂಬಂಧಿಸಿದ ಆಯಾ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



