Connect with us

Dvgsuddi Kannada | online news portal | Kannada news online

ಬಿಬಿಎಂಪಿಯಲ್ಲಿ ಖಾಲಿ ಇರುವ 3,673 ಹುದ್ದೆಗಳಿಗೆ ಅರ್ಜಿ ಆಹ್ವಾನ

bbmp

ಪ್ರಮುಖ ಸುದ್ದಿ

ಬಿಬಿಎಂಪಿಯಲ್ಲಿ ಖಾಲಿ ಇರುವ 3,673 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು:  ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (BBMP) ಘನತ್ಯಾಜ್ಯ ನಿರ್ವಹಣಾ ವಿಭಾಗದಲ್ಲಿ ಖಾಲಿಯಿರುವ 3673  ಹುದ್ದೆಗಳ ಭರ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಟ್ಟು 3673 ಪೌರಕಾರ್ಮಿಕರನ್ನು ಆಯ್ಕೆ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಸ್ಥಳೀಯ ವೃಂದದ ಹುದ್ದೆಗಳು (KK) ಕಲ್ಯಾಣ ಕರ್ನಾಟಕ- 430 ಹುದ್ದೆಗಳು,  ಉಳಿಕೆ ಮೂಲ ವೃಂದದ ಹುದ್ದೆಗಳು (RPC)- 3243 ಹುದ್ದೆಗಳಾಗಿವೆ.

ಈ ಹುದ್ದೆಗಳಿಗೆ ಯಾವುದೇ ಶೈಕ್ಷಣಿಕ ಅರ್ಹತೆಯನ್ನು ನಿಗದಿಪಡಿಸಿಲ್ಲ. ಇದಾಗ್ಯೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಯಾವುದಾದರೂ ರೀತಿಯಲ್ಲಿ ಕನಿಷ್ಠ 2 ವರ್ಷ ಕೆಲಸ ಮಾಡಿದ ಅನುಭವ ಹೊಂದಿರಬೇಕೆಂದು ತಿಳಿಸಲಾಗಿದೆ. ಈ ಹುದ್ದೆಗಳಿಗೆ 55 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ 17 ಸಾವಿರದಿಂದ 28,950 ರೂ.ವರೆಗೆ ವೇತನ ಸಿಗಲಿದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ನಿಗಮದ ಆಯಾ ವಾರ್ಡ್‌ನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಘನತ್ಯಾಜ್ಯ ನಿರ್ವಹಣೆ) ಕಚೇರಿಗೆ ಕಳುಹಿಸಬೇಕಾಗುತ್ತದೆ. ಅಧಿಕೃತ ವೆಬ್‌ಸೈಟ್  bbmp.gov.in ಭೇಟಿ ನೀಡಿ ಪರಿಶೀಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 30.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top