ದಾವಣಗೆರೆ: ಜಿಲ್ಲೆಯ ಹರಿಹರ ತಾಲೂಕಿನ ಮಲೇಬೆನ್ನೂರು ಸಮೀಪದ ನಂದಿತಾವರೆ ಗ್ರಾಮದ ಬಳಿ ಹೊಸಪೇಟೆ -ಶಿವಮೊಗ್ಗ ರಸ್ತೆ ರಾಜ್ಯ ಹೆದ್ದಾರಿ 25ರಲ್ಲಿ 6.30 ಕೋಟಿಯ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆ ನೆರವೇರಿಸಲಾಯಿತು. ಕಾರ್ಯಕ್ರಮದಲ್ಲಿ ಸಂಸದ ಜಿ ಎಮ್ ಸಿದ್ದೇಶ್ವರ ಗುದ್ದಲಿ ಪೂಜೆ ಮೂಲಕ ಕಾಮಗಾರಿಗೆ ಚಾಲನೆ ಕೊಟ್ಟರು.
ಈ ಸಂದರ್ಭದಲ್ಲಿ ಶಾಸಕ ಎಸ್ ರಾಮಪ್ಪ, ಜಿಲ್ಲಾ ಬಿಜೆಪಿ ಅಧ್ಯಕ್ಷ ಎಸ್. ಎಂ. ವೀರೇಶ್ , ಚಂದ್ರಶೇಖರ್ ಪೂಜಾರ್ , ತಾಲೂಕ್ ಪಂಚಾಯತ್ ಮಾಜಿ ಅಧ್ಯಕ್ಷ ಐರಣಿ ಅಣ್ಣೀಶ್, ಜಿಗಳಿ ಹನುಮಗೌಡ , ಗ್ರಾಮಾಂತರ ಅಧ್ಯಕ್ಷ ಎಂ ಪಿ ಲಿಂಗರಾಜ್, ಪ್ರಧಾನ ಕಾರ್ಯದರ್ಶಿ ಮಹಾಂತೇಶ್ ಹುಗ್ಗಿ, ನಂದಿಗಾವಿ ರಮೇಶ್ ಹಾಗೂ ಗ್ರಾಮಸ್ಥರು ಹಿರಿಯ ಮುಖಂಡರು , ಕಾರ್ಯಕರ್ತರು ಉಪಸ್ಥಿತರಿದ್ದರು.



