ದಾವಣಗೆರೆ: ಜಿಲ್ಲೆಯ ಹರಿಹರ ತಾಲ್ಲೂಕಿನ ರಾಜನಹಳ್ಳಿಯ ಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿ ಫೆಬ್ರುವರಿ 8 ಮತ್ತು 9ರಂದು ಆಯೋಜಿಸಿರುವ 5ನೇ ವಾಲ್ಮೀಕಿ ಜಾತ್ರಾ ಮಹೋತ್ಸವ ನಡೆಯಲಿದ್ದು, ವೇದಿಕೆ ಹಾಗೂ ಮಹಾಮಂಟಪ ನಿರ್ಮಾಣಕ್ಕೆ ಪ್ರಸನ್ನಾನಂದ ಸ್ವಾಮೀಜಿ ಹಂದರಗಂಬ ಪೂಜೆ ನೆರೆವೇರಿಸಿದರು.
ನಂತರ ಮಾತನಾಡಿದ ಶ್ರೀಗಳು, ರಾಜ್ಯದ ವಿವಿಧ ಜಿಲ್ಲೆಯಲ್ಲಿ ಸಭೆ ನಡೆಸಿ ಜಾತ್ರಾ ಮಹೋತ್ಸವಕ್ಕೆ ಆಹ್ವಾನಿಸಲಾಗಿದೆ. ಧಾರ್ಮಿಕ ಕಾರ್ಯಕ್ರಮವಾಗಿ ಆರಂಭಿಸಿದ ಜಾತ್ರೆ ಈಗ ಜನ ಜಾಗೃತಿ ಆಂದೋಲನವಾಗಿ ರೂಪುಗೊಂಡಿದೆ ಎಂದರು.
ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷ, ಶಾಸಕ ಎಸ್.ವಿ. ರಾಮಚಂದ್ರ, ಸಂಚಾಲಕ ಕೆ.ಪಿ. ಪಾಲಯ್ಯ, ಗುರುಪೀಠದ ಆಡಳಿತಾಧಿಕಾರಿ ಟಿ. ಓಬಳಪ್ಪ, ಕೆಪಿಎಸ್ಸಿ ಮಾಜಿ ಸದಸ್ಯ ಜಿ.ಟಿ. ಚಂದ್ರಶೇಖರಪ್ಪ, ನಿವೃತ್ತ ಜೈಲರ್ ಹರ್ತಿಕೋಟೆ ವಿರೇಂದ್ರಸಿಂಹ, ರಾಜನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಚೈತ್ರಾ ಲಂಕೇಶ್, ನಗರಸಭಾ ಸದಸ್ಯ ದಿನೇಶ್ ಬಾಬು, ಮುಖಂಡರಾದ ಹೊದಿಗೆರೆ ರಮೇಶ್, ಕೆ.ಬಿ. ಮಂಜಪ್ಪ, ಮಂಗೇನಹಳ್ಳಿ ಲೋಹಿತ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.