ಧಾರವಾಡ: ಕೃಷಿ ವಿಶ್ವವಿದ್ಯಾಲಯದ ಸಮುದಾಯ ವಿಜ್ಞಾನ ಮಹಾವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕ ತಾತ್ಕಾಲಿಕ ಹುದ್ದೆ ನೇಮಕಾತಿಗೆ ನೇರ ಸಂದರ್ಶನ ಕರೆಯಲಾಗಿದೆ.
ನೇಮಕಾತಿ ಪಡೆಯಲು ಬಯಸುವ ಅಭ್ಯರ್ಥಿಗಳು ಆಹಾರ ವಿಜ್ಞಾನ ಹಾಗೂ ಪೋಷಣೆಯಲ್ಲಿ ಸ್ನಾತಕೋತ್ತರ ಪದವಿ, ಪಿಹೆಚ್‍ಡಿ ಹಾಗೂ ನೆಟ್ ತೇರ್ಗಡೆಯಾಗಿರಬೇಕು. ಅಭ್ಯರ್ಥಿಗಳು ಅಂತರಜಾಲ್ http://www.uasd.edu ದಲ್ಲಿ ಅರ್ಜಿ ನಮೂನೆ ಪಡೆದು, ಎರಡು ಪ್ರತಿಗಳೊಂದಿಗೆ ಫೆ.01 ರಂದು ಬೆಳಿಗ್ಗೆ 10-30 ಗಂಟೆಗೆ ವಿದ್ಯಾಧಿಕಾರಿಗಳು, ಸಮುದಾಯ ವಿಜ್ಞಾನ ಮಹಾವಿದ್ಯಾಲಯ, ಕೃಷಿ ವಿಶ್ವವಿದ್ಯಾಲಯದಲ್ಲಿ ಖುದ್ದಾಗಿ ಸಂದರ್ಶನಕ್ಕೆ ಹಾಜರಾಗಬೇಕು.
ಕೃಷಿ ಮಹಾವಿದ್ಯಾಲಯ
ಫೆ.2 ರಂದು ಎಂಬಿಎ ಪದವಿಧರ ಸಹಾಯಕರ ತಾತ್ಕಾಲಿಕ ನೇಮಕಾತಿಗೆ ಸಂದರ್ಶನ ನಡೆಯಲಿದೆ. ಕೃಷಿ ಸಂಖ್ಯಾ ಶಾಸ್ತ್ರ ವಿಭಾಗಕ್ಕೆ ಒಂದು ಎಂಬಿಎ ಪದವಿಧರ ಸಹಾಯಕರನ್ನು ತಾತ್ಕಾಲಿಕವಾಗಿ ನೇಮಿಸಿಕೊಳ್ಳಲು ಸಂದರ್ಶನ ಕರೆಯಲಾಗಿದೆ.
ನೇಮಕಾತಿ ಪಡೆಯಲು ಬಯಸುವವರು ಅರ್ಜಿ ನಮೂನೆಯ ಎರಡು ಪ್ರತಿಗಳೊಂದಿಗೆ ಫೆ.2 ರಂದು ಬೆಳ್ಳಿಗೆ 11 ಗಂಟೆಗೆ ಕೃಷಿ ಮಹಾವಿದ್ಯಾಲಯದ ಡೀನ್ ರವರ ಕೃಷಿನಿರ್ದೇಶಕರ ಕಚೇರಿಯಲ್ಲ್ಲಿ ಹಾಜರಾಗಬೆಕು. ಸಂದರ್ಶನಕ್ಕೆ ಬರುವಾಗ ತಮ್ಮ ವಿದ್ಯಾರ್ಹತೆಗೆ ಸಂಬಂಧಪಟ್ಟ ಎಲ್ಲ ಮೂಲ ದಾಖಲೆಗಳು ಹಾಗೂ ಎರಡು ಸೆಟ್ ಜೆರಾಕ್ಸ್ ಪ್ರತಿಗಳನ್ನು ಸಂದರ್ಶನದ ಸಮಯದಲ್ಲಿ ತರಬೇಕು.
ಹೆಚ್ಚಿನ ಮಾಹಿತಿಗಾಗಿ ಡೀನ್ ರವರ ಕಚೇರಿ ಕೃಷಿ ಮಹಾವಿದ್ಯಾಲಯ ಧಾರವಾಡ-580005 ಗೆ ಸಂಪರ್ಕಿಸಬಹುದು ಎಂದು ಕೃಷಿ ಮಹಾವಿದ್ಯಾಲಯದ ಪ್ರಕಟಣೆ ತಿಳಿಸಿದೆ.



