ದಾವಣಗೆರೆ: ಜಿಲ್ಲಾ 12 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ ಜ.30ರಂದು ಸೋಮವಾರ ಮಧ್ಯಾಹ್ನ 3 ಗಂಟೆಗೆ ಚನ್ನಗಿರಿ ತಾಲ್ಲೂಕು ಬಸವಾಪಟ್ಟಣ ಹೋಬಳಿಯ ಕೆಂಗಾಪುರ ಗ್ರಾಮದ ಶ್ರೀ ರಾಮಲಿಂಗೇಶ್ವರ ವಿದ್ಯಾಸಂಸ್ಥೆಯ ಆವರಣದಲ್ಲಿ ನಡೆಯಲಿದೆ. ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಬಿ.ವಾಮದೇವಪ್ಪನವರ ಅಧ್ಯಕ್ಷತೆಯಲ್ಲಿ ಸಭೆ ಕರೆಯಲಾಗಿದೆ.
ಈ ಸಭೆಗೆ ಕನ್ನಡಾಭಿಮಾನಿಗಳು,ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರುಗಳು, ಕನ್ನಡಪರ, ದಲಿತಪರ, ರೈತಪರ, ಮಹಿಳಾಪರ ಸಂಘಟನೆಗಳ ಪ್ರಮುಖರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಲಹೆ ಸಹಕಾರ ನೀಡಬೇಕೆಂದು ಚನ್ನಗಿರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಸವಾಪಟ್ಟಣದ ಎಲ್.ಜಿ.ಮಧುಕುಮಾರ್ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ: 9448786664 ಸಂಪರ್ಕಿಸಲು ಕೋರಿದ್ದಾರೆ.