ಕೊಟ್ಟೂರು: ಸಿರಿಗೆರೆಯ ತರಳಬಾಳು ಬೃಹನ್ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ ಇಂದಿನಿಂದ (ಜ.28ರಿಂದ ಫೆ.5ರವರೆಗೆ) ತರಳಬಾಳು ಹುಣ್ಣಿಮೆ ಮಹೋತ್ಸವಕ್ಕೆ ಅದ್ಧೂರಿಯಾಗಿ ನಡೆಯಲಿದೆ. ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಿಸಲು https://www.youtube.com/live/69xQ2xLUCX4?feature=share ಮೇಲೆ ಕ್ಲಿಕ್ ಮಾಡಿ…
ಈ ಹುಣ್ಣಿಮೆ ಮಹೋತ್ಸವ ಈ ಬಾರಿ ಅದ್ಧೂರಿಯಾಗಿ ಜರುಗಲಿದೆ. ಇಂದು ಸಂಜೆ 6ಕ್ಕೆ ಮಹೋತ್ಸವ ಉದ್ಘಾಟನೆ ಆಗಲಿದೆ. ವಿಜಯಪುರದ ನಿರ್ಭಯಾನಂದ ಸ್ವಾಮೀಜಿ, ಹರಿಹರದ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್, ಶಾಸಕರಾದ ಎಸ್.ಎ.ರವೀಂದ್ರನಾಥ್, ಮಾಡಾಳು ವಿರೂಪಾಕ್ಷಪ್ಪ, ಪಿ.ಟಿ.ಪರಮೇಶ್ವರ ನಾಯ್ಕ್, ಎಂ.ಚಂದ್ರಪ್ಪ, ಸತೀಶ್ ರೆಡ್ಡಿ ಪಾಲ್ಗೊಳ್ಳಲಿದ್ದಾರೆ. ಕಾದಂಬರಿಕಾರ ಬಿ.ಎಲ್.ವೇಣು, ಪತ್ರಕರ್ತ ರಂಗನಾಥ್ ಭಾರದ್ವಾಜ್, ಹಿರೇಮಗಳೂರು ಕಣ್ಣನ್ ಉಪನ್ಯಾಸ ನೀಡಲಿದ್ದಾರೆ.



