ದಾವಣಗೆರೆ: ಜಿಲ್ಲಾಡಳಿತ ವತಿಯಿಂದ ಪೌರಕಾರ್ಮಿಕ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ನಗದು ಬಹುಮಾನ ಹಾಗೂ ಟ್ಯಾಬ್ ಗಳ ವಿತರಣೆ ಕಾರ್ಯಕ್ರಮವನ್ನು ಫೆ.10 ರಂದು ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭೆಯಲ್ಲಿ ಶುಕ್ರವಾರ ಜರುಗಿದ ಪೌರ ಕಾರ್ಮಿಕ ಪ್ರತಿಭಾ ಪುರಸ್ಕಾರ ಸಮಾರಂಭದ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರು ಭಾಗವಹಿಸಲಿದ್ದು, ಅಚ್ಚುಕಟ್ಟುಗಿ ಕರ‍್ಯಕ್ರಮ ಆಯೋಜನೆಗೆ ಸೂಚನೆ ನೀಡಿದರು.
ಪೌರ ಕಾರ್ಮಿಕರಿಗೆ ಅರಿವು ಮತ್ತು ಜಾಗೃತಿ ಮೂಡಿಸುವ ಕರ‍್ಯಕ್ರಮ ಬೀದಿನಾಟಕ ಪ್ರರದರ್ಶನ ಸೇರಿದಂತೆ ವಿವಿಧ ಕರ‍್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತರು ರೇಣುಕ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಚಂದ್ರನಾಯ್ಕ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೆಶಕ ನಾಗರಾಜ ಕೆ, ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧಿಕಾರಿ ರಮೇಶ್, ಡಿವಿಡಿಸಿ ಡಾ. ಮಹಂತೇಶ್ ಎಂ, ಇತರ ಅಧಿಕಾರಿಗಳು ಉಪಸ್ಥಿತರಿದ್ದರು.



