ದಾವಣಗೆರೆ: ಖೇಲೋ ಇಂಡಿಯಾ ಯೋಜನೆಯಡಿ ಜಿಲ್ಲೆಯ ಕುಸ್ತಿ ಖೇಲೋ ಇಂಡಿಯಾ ಕೇಂದ್ರದಲ್ಲಿ ಉಚಿತ ತರಬೇತಿ ನೀಡಲು ಒಬ್ಬ ತರಬೇತುದಾರರ ಆಯ್ಕೆ ಮಾಡಿಕೊಳ್ಳಲಾಗುತ್ತಿದೆ. ರಾಷ್ಡ್ರೀಯ/ ಅಂತರಾಷ್ಟ್ರೀಯ ಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಸಾಧನೆ ಮಾಡಿದ ಜಿಲ್ಲೆಯ ಕುಸ್ತಿ ಪಟುಗಳು ಫೆ. 7 ರೊಳಗಾಗಿ ಜಿಲ್ಲಾ ಕ್ರೀಡಾಂಗಣದಲ್ಲಿರುವ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಪ್ರಸ್ತಾವನೆಯನ್ನು ಸಲ್ಲಿಸಬಹುದೆಂದು ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



