ದಾವಣಗೆರೆ: ಆಮ್ ಆದ್ಮಿ ಪಕ್ಷದಿಂದ ಫೆ.26 ರಂದು ದಾವಣಗೆರೆಯಲ್ಲಿ ರಾಜ್ಯಮಟ್ಟದ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು, ಪಕ್ಷದ ರಾಷ್ಟ್ರಾಧ್ಯಕ್ಷ ಅರವಿಂದ ಕೇಜ್ರೀವಾಲ್ ಆಗಮಿಸಲಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಉಪಾಧ್ಯಕ್ಷ ಡಾ.ವಿಶ್ವನಾಥ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬರುವ ರಾಜ್ಯ ಚುನಾವಣೆಯಲ್ಲಿ ಆಮ್ ಆದ್ಮಿಪಕ್ಷ ಎಲ್ಲಾ 224 ಕ್ಷೇತ್ರಗಳಲ್ಲೂ ಸ್ಪರ್ಧೆ ಮಾಡಲಿದೆ. ಫೆ.26 ರಂದು ದಾವಣಗೆರೆಯ ಕಾರ್ಯಕ್ರಮದ ನಂತರ ಪಕ್ಷದ ಚುನಾವಣಾ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಗುವುದು ಎಂದರು.
ನಗರದ ಎಸ್ ಎಸ್ ಲೇಜೌಟ್ ನಲ್ಲಿರುವ ರಿಂಗ್ ರಸ್ತೆ ಬಳಿ ದಾವಣಗೆರೆಯ ಕಾರ್ಯಾಲಯಕ್ಕೆ ಚಾಲನೆ ನೀಡದ್ದಾರೆ ಎಂದರು. ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಜಾಫರ್ ಮೋಹಿಯುದ್ದೀನ್ ಮಾತನಾಡಿ ದಾವಣಗೆರೆಯ ಎಲ್ಲಾ ಕ್ಷೇತ್ರದಲ್ಲಿ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ. ಭ್ರಷ್ಟಾಚಾರ ರಹಿತ ಸರ್ಕಾರ ನಿರ್ಮಾಣ ನಮ್ಮ ಕನಸು. ರಾಜ್ಯದಲ್ಲಿ ಬದಲಾವಣೆ ಗಾಳಿ ಬೀಸುತ್ತಿದ್ದು ಆಮ್ ಆದ್ಮಿ ಪಕ್ಷಕ್ಕೆ ಜನ ಬೆಂಬಲ ನೀಡುವ ಆಶಯವಿದೆ ಎಂದರು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಚಂದ್ರು ಬಸವಂತಪ್ಪ, ಗಣೇಶ್ ದುರ್ಗದ, ಧರ್ಮಾನಾಯ್ಕ್, ಸುರೇಶ್, ರವೀಂದ್ರನಾಥ್, ಪ್ರಶಾಂತ್ ಇದ್ದರು.



