ದಾವಣಗೆರೆ; ಅತೀ ಭೀಕರ ಕಾರು ಅಪಘಾತವೊಂದರಲ್ಲಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಇನ್ನೊಬ್ಬನಿಗೆ ಗಂಭೀರ ಗಾಯವಾಗಿದೆ. ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ದಾವಣಗೆರೆಯಲ್ಲಿ ಮದುವೆ ಮುಗಿಸಿಕೊಂಡು ಚನ್ನಗಿರಿ ತಾಲೂಕಿನ ಪಾಂಡೊಮಟ್ಟಿ ಗ್ರಾಮಕ್ಕೆ ಕಾರಿನಲ್ಲಿ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
ಟ್ರ್ಯಾಕ್ಟರ್ ಹಾಗೂ ಲಾರಿಗೆ ಏಕಕಾಲದಲ್ಲಿ ಕಾರು ಗುದ್ದಿದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಯುವಕರು ಸಾವನಪ್ಪಿರುವ ದಾರುಣ ಘಟನೆ ದಾವಣಗೆರೆ ತಾಲೂಕಿನ ರಾಮಗೊಂಡನಹಳ್ಳಿ ಬಳಿ ತಡರಾತ್ರಿ ನಡೆದಿದೆ. ಕಾರಿನಲ್ಲಿದ್ದ ಇಬ್ಬರು ಸಾವನಪ್ಪಿದರೆ ಓರ್ವನಿಗೆ ಗಂಭೀರ ಗಾಯಗಳಾಗಿವೆ.
ಬಿಲ್ಲಹಳ್ಳಿ ಮಂಜುನಾಥ (24), ಪಾಂಡೊಮಟ್ಟಿ ಅಮೃತ್ (23) ಸಾವನ್ನಪ್ಪಿದ ಯುವಕರು ಎಂದು ತಿಳಿದು ಬಂದಿದೆ. ಓರ್ವನ ಸ್ಥಿತಿ ಗಂಭೀರವಾಗಿದ್ದು, ದಾವಣಗೆರೆ ಎಸ್ ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮೊದಲು ಎದುರಿಗೆ ಬರುತ್ತಿದ್ದ ಟ್ರಾಕ್ಟರ್ಗೆ ಕಾರು ಡಿಕ್ಕಿ ಹೊಡೆದಿದ್ದು, ಬಳಿಕ ಲಾರಿಗೆ ಡಿಕ್ಕಿ ಹೊಡೆದಿದೆ. ಕಾರು ಸಂಪೂರ್ಣ ಜಖಂಗೊಂಡಿದೆ. ಮಾಯಕೊಂಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಯುವಕರನ್ಬು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಮದುವೆ ಮುಗಿಸಿ ಮನೆ ಸೇರಬೇಕಾದವರು ಮಸಣ ಸೇರುವಂತಾಗಿದೆ. ಯುವಕರನ್ನು ಬಲಿ ಪಡೆದಯ ಯಮರಾಯನಿಗೆ ಕುಟುಂಬಸ್ಥರು ಹಿಡಿಶಾಪ ಹಾಕಿದ್ದಾರೆ.



