ದಾವಣಗೆರೆ: ನಗರದ ಕೇಂದ್ರ ಸ್ಥಳದಲ್ಲಿರುವ ಮಹಾನಗರ ಪಾಲಿಕೆ ಎದುರಲ್ಲಿಯೇ ಸರಣಿ ಅಪಘಾತವೊಂದು ಸಂಭವಿಸಿದೆ. ಬೈಕ್, ಆಟೋ, ಕಾರಿಗೆ ಗುದ್ದಿದ ಲಾರಿ ಚಾಲಕ ಪರಾರಿಯಾಗಿದ್ದಾನೆ. ಪಿಬಿ ರಸ್ತೆಯ ರೈಲ್ವೆ ನಿಲ್ದಾಣ ಬಳಿಯ ಸಿಗ್ನಲ್ ಬಳಿ ಈ ಘಟನೆ ನಡೆದಿದ್ದು, ಲಾರಿ ಚಾಲಕ ತನ್ನ ಮುಂದಿನ ಕಾರು, ಆಟೋ, ಬೈಕ್ ಗೆ ಒಮ್ಮೆಲೇ ಡಿಕ್ಕಿ ಹೊಡೆದಿದ್ದಾನೆ. ಇದರಿಂದ ಕಾರು, ಆಟೋ, ಜಖಂಗೊಂಡಿವೆ. ಘಟನೆ ನಡೆಯುತ್ತಿದ್ದಂತೆ ಪಿಬಿ ರಸ್ತೆಯಲ್ಲಿ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗುತ್ತು. ಕೂಡಲೇ ಸ್ಥಳಕ್ಕೆ ಆಗಮಿಸಿದ ದಾವಣಗೆರೆ ದಕ್ಷಿಣ ಸಂಚಾರಿ ಪೊಲೀಸರು ಟ್ರಾಫಿಕ್ ಕ್ಲಿಯರ್ ಮಾಡಿ, ಲಾರಿಯನ್ನು ವಶಕ್ಕೆ ಪಡೆದಿದ್ದು, ಚಾಲಕನಿಗೆ ಹುಡುಕಾಟ ನಡೆಸುತ್ತಿದ್ದಾರೆ.



