ಬೆಂಗಳೂರು: ಸರ್ಕಾರಿ ಜಮೀನುಗಳಲ್ಲಿ ಅನಧಿಕೃತವಾಗಿ ಸಾಗುವಳಿಯನ್ನು ಸಕ್ರಮಗೊಳಿಸಲು ನಮೂನೆ 57ರಲ್ಲಿ ಅರ್ಜಿ ಸಲ್ಲಿಸಲು ಅವಧಿಯನ್ನು ರಾಜ್ಯ ಸರ್ಕಾರ ಮತ್ತೆ ವಿಸ್ತರಿಸಿದೆ.
ಈ ಬಗ್ಗೆ ಮಾಹಿತಿ ನೀಡಿದ ಕಂದಾಯ ಸಚಿವ ಆರ್. ಅಶೋಕ್ , 2005, ಜನವರಿ 1ಕ್ಕಿಂತಲೂ ಪೂರ್ವದಲ್ಲಿ ಅನಧಿಕೃತವಾಗಿ ಸಾಗುವಳಿ ಮಾಡುತ್ತಿರುವವರಿಗೆ ಇದು ಅನ್ವಯವಾಗಲಿದೆ. ಸರ್ಕಾರಿ ಜಮೀನುಗಳಲ್ಲಿನ ಅನಧಿಕೃತ ಸಾಗುವಳಿದಾರಿಗೆ ಭೂಮಿ ಸಕ್ರಮಗೊಳಿಸುವುದಕ್ಕಾಗಿ ಕರ್ನಾಟಕ ಭೂ ಕಂದಾಯ ಕಾಯ್ದೆ -1964ರ ಕಲಂ 94(ಎ)ರನ್ವಯ ಅವಕಾಶ ನೀಡಲಾಗಿದೆ. ನಮೂನೆ-57ರಲ್ಲಿ ಅರ್ಜಿಗಳನ್ನು ಸಲ್ಲಿಸಲು ಮೇ 31 ರ 2023 ರವರೆಗೆ ಅವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಸಾಗುವಳಿ ಅನುಭವ ಹೊಂದಿದ ರೈತರು, ಸಕ್ರಮಗೊಳಿಸಲು ಭೂ ಕಂದಾಯ ಕಾಯ್ದೆ 1964ರ ಕಲಂ 94 ಎ, 94 ಬಿ, 94ಎ (4) ರ ಅಡಿ ನಮೂನೆ 50, 53 ರಲ್ಲಿ ಈಗಾಗಲೇ ಅರ್ಜಿ ಸಲ್ಲಿಸದವರು ನಮೂನೆ 57 ರಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.



