ಬೆಂಗಳೂರು: ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ವೃತ್ತಿಪರ ಶಿಕ್ಷಣದಲ್ಲಿ ಪ್ರಥಮ ದರ್ಜೆಯಲ್ಲಿ ಪಾಸದವರಿಗೆ ಸರ್ಕಾರ ಭರ್ಜರಿ ಸುವರ್ಣಾವಕಾಶ ನೀಡಿದ್ದು, ಗರಿಷ್ಠ 35 ಸಾವಿರವರೆಗೆ ವಿದ್ಯಾರ್ಥಿ ವೇತನ ನೀಡಲಿದೆ.
ಕರ್ನಾಟಕ ಸರ್ಕಾರ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುತ್ತ ಬಂದಿದೆ. ಪ್ರಸಕ್ತ 2023-24ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಸಮಾಜ ಕಲ್ಯಾಣ ಇಲಾಖೆ ನಿಡುವ ವಿದ್ಯಾರ್ಥಿ ವೇತನಕ್ಕೆ ಅರ್ಹರು ಅರ್ಜಿ ಸಲ್ಲಿಸಬಹುದು. ಫೆ.28 ಕೊನೆಯ ದಿನವಾಗಿದೆ. ವಿವಿಧ ಕೋರ್ಸ್‌ಗಳಲ್ಲಿ ಅಧ್ಯಯನ ಮಾಡುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳು ಇಲಾಖೆ ನೀಡುವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು. ಈ ಸಂಬಂಧ ಅರ್ಹರು ಹೆಚ್ಚಿನ ಮಾಹಿತಿಗೆ ಹಾಗೂ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಈ ವೆಬ್‌ಸೈಟ್‌ಗೆ sw.kar.nic.in ಭೇಟಿ ನೀಡಿ.
- ಯಾರಿಗೆ ಎಷ್ಟು ವಿದ್ಯಾರ್ಥಿ ವೇತನ:
- 2nd ಪಿಯುಸಿ ಮತ್ತು ಮೂರು ವರ್ಷದ ಪಾಲಿಟೆಕ್ನಿಕ್ ಡಿಪ್ಲೊಮ ವಿದ್ಯಾರ್ಥಿಗಳಿಗೆ 20,000 ರೂಪಾಯಿ
- ಪದವಿ ವಿದ್ಯಾರ್ಥಿಗಳಿಗೆ 25,000 ರೂಪಾಯಿ.
- ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ 30,000 ರೂಪಾಯಿ
- ಕೃಷಿ, ಇಂಜಿನಿಯರ್, ವೆಟರನರಿ, ಮೆಡಿಷನ್ ಕೋರ್ಸ್ ವಿದ್ಯಾರ್ಥಿಗಳಿಗೆ 35,000ರೂಪಾಯಿ
ರಾಜ್ಯ ಸಮಾಜ ಕಲ್ಯಾಣ ಇಲಾಖೆಯು ಕಳೆದ 2021ನೇ ಸಾಲಿನಲ್ಲಿ ಮೊದಲ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲು ಅವರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. 2022-23ನೇ ಸಾಲಿನಲ್ಲಿ ವಿವಿಧ ಕೋರ್ಸ್‌ಗಳಲ್ಲಿ ಅಧ್ಯಯನ ಮಾಡುತ್ತಿರುವ ಎಸ್‌ಸಿ ಮತ್ತು ಎಸ್‌ಟಿ (SC, ST)ವಿದ್ಯಾರ್ಥಿಗಳು ಈ ಪ್ರೋತ್ಸಾಹಧನಕ್ಕೆ ಅರ್ಜಿ ಸಲ್ಲಿಸಲು ಅರ್ಹರ ಎಂದು ಇಲಾಖೆ ತಿಳಿಸಿದೆ.ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ವೆಬ್‌ಸೈಟ್ sw.kar.nic.in ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಗಳು ಫೆಬ್ರವರಿ 28ರೊಳಗೆ ಸೂಕ್ತ ದಾಖಲೆಗಳ ಸಹಿತಿ ಅರ್ಜಿ ಸಲ್ಲಿಸಬೇಕು.
ಮೊದಲು ಅಧಿಕೃತ ವೆಬ್‌ಸೈಟ್ sw.kar.nic.in ಗೆ ಭೇಟಿ ನೀಡಬೇಕು. ನಂತರ ಮುಖಪುಟದಲ್ಲಿ ಮೆಟ್ರಿಕ್ ನಂತರದ ಪದವಿ/ ಸ್ನಾತಕೋತ್ತರ ಪದವಿ ಪ್ರೋತ್ಸಾಹಧನ ಆಯ್ಕೆ ಮಾಡಿಕೊಳ್ಳಬೇಕು. ಬಳಿಕ ತೆರೆದುಕೊಳ್ಳುವ ಪುಟದಲ್ಲಿ ಆನ್‌ಲೈನ್ ಅರ್ಜಿ ಲಿಂಕ್ ಒತ್ತಬೇಕು. ಅಲ್ಲಿ ಅಗತ್ಯ ದಾಖಲೆ/ವಿವರ ನಮೂದಿ ಸಲ್ಲಿಸಬೇಕು. ಕೊನೆಗೆ ಅಲ್ಲಿ ಕೇಳುವ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು. ಅಂಕಪಟ್ಟಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಪ್ರತಿ, ಭಾವಚಿತ್ರ’ ಇಷ್ಟನ್ನೂ ಅರ್ಜಿ ಜೊತೆಗೆ ಸಬ್ಮಿಟ್ ಮಾಡಬೇಕು